ಸಾವರ್ಕರ್ ಅವರಂತಹ ದೇಶಭಕ್ತನನ್ನು ಪ್ರಸ್ತುತ ದಿನಗಳಲ್ಲಿ ಹೇಡಿ ಎಂದು ಬಿಂಬಿಸುತ್ತಿರುವುದು ಅಪರಾಧ. ಸಾವರ್ಕರ್ ಜೀವಮಾನದಲ್ಲಿ ಅನುಭವಿಸಿದ ನೋವಿನ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ವ್ಯಕ್ತಿಗಳ ನಡೆ ನಿಜಕ್ಕೂ ವಿಷಾದನೀಯ.ಸಾವರ್ಕರ್ ಹಿಂದೂರಾಷ್ಟ್ರದ ಕನಸು ಹೊತ್ತವರು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಪೋಸ್ಟ್ ಕಾರ್ಡ್ ಮತ್ತು ಟಿವಿ ವಿಕ್ರಮವಾಹಿನಿಯ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಹೇಳಿದರು.
ಅವರು ವಿವೇಕಾನಂದ ಮಹಾವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಐಕ್ಯುಎಸಿ ಘಟಕ,ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಕಾಲೇಜು ಎಬಿವಿಪಿ ಘಟಕಗಳ ಸಂಯುಕ್ತಆಶ್ರಯದಲ್ಲಿ ಸಾವರ್ಕರ್ ಜಯಂತಿಯ ಅಂಗವಾಗಿಏರ್ಪಡಿಸಲಾಗಿದ್ದ‘ಕ್ಷಾತ್ರಚೇತನಸಾವರ್ಕರ್ ಎಂಬ ವಿಚಾರಗೋಷ್ಠಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿಚಾರಗೋಷ್ಠಿಯನ್ನು ಉದ್ಘಾಟಿಸಿದ ಶ್ರೀಟಾಕ್ಸ್ ವಾಹಿನಿಯ ಸಂಪಾದಕಿ, ಪತ್ರಕರ್ತೆ ಶ್ರೀಲಕ್ಷ್ಮೀ ರಾಜ್‍ಕುಮಾರ್ ಮಾತನಾಡಿ ವೀರ ಸಾವರ್ಕರ್ ಅವರಂತಹ ಮಹಾನ್‍ಚೇತನರ ತ್ಯಾಗಕ್ಕೆ ಭಾರತೀಯರು ಸದಾ ಋಣಿಯಾಗಿರಬೇಕು. ಭಾರತೀಯರಿಗೆ ಸ್ವಾತಂತ್ರ ಹೋರಾಟದ ಮೂಲಕ ಪುನರ್ಜನ್ಮ ನೀಡಿದ ಸಾವರ್ಕರ್ ಅವರ ಕೊಡುಗೆ ಅವಿಸ್ಮರಣೀಯ.ಇಂತಹ ಮಹಾನ್ ಚೇತನರನ್ನು ದೇಶ ವಿರೋಧಿಯಾಗಿ ಬಿಂಬಿಸುತ್ತಿರುವುದು ವಿಷಾದನೀಯ ಎಂದು ಹೇಳಿದರು.
ವಿದ್ಯಾರ್ಥಿ ವಿಚಾರ ಮಂಡನೆಯಲ್ಲಿ ಮಂಗಳೂರು ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ವಿದ್ಯಾರ್ಥಿ ಪೃಥ್ವೀಶ್ ಧರ್ಮಸ್ಥಳ ‘ಸಮಾಜ ಸುಧಾರಕ ಸಾವರ್ಕರ್’ ಎಂಬ ವಿಷಯದ ಕುರಿತು ಮಾತನಾಡಿದರು.ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕೌಶಿಕ್ ಜಿ ಎನ್‘ಸಾವರ್ಕರ್ ಸಾಹಿತ್ಯ ಮತ್ತು ಸ್ವಾತಂತ್ರ್ಯ ಸಂಗ್ರಾಮ’ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.
ಎಬಿವಿಪಿ ಮಂಗಳೂರು ವಿಭಾಗದ ಸಂಚಾಲಕ ಹರ್ಷಿತ್ ಕೊೈಲ ಮಾತನಾಡಿದರು.ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್‍ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ.ವಿಷ್ಣುಗಣಪತಿ ಭಟ್ ಮಾತನಾಡಿದರು.ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಟಿವಿ ವಿಕ್ರಮ ವಾಹಿನಿಯ ನಿರೂಪಕಿ ಮುಮ್ತಾಜ್ ನೆಲ್ಲಿಯಡ್ಕ ಮತ್ತುಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಆಶಿಶ್ ಎನ್ ಎಂ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪದವಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಶ್ವಿನಿ ವೈಯಕ್ತಿಕ ಗೀತೆ ಹಾಡಿದರು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಮಂಜುನಾಥ್ ಜೋಡುಕಲ್ಲು ಸ್ವಾಗತಿಸಿ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ತಾರಕರುಣ್ ವಂದಿಸಿದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿನಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…