Advertisement
The Rural Mirror ಕಾಳಜಿ

ಬನ್ನಿ….ಪಾಲ್ಗೊಳ್ಳಿ…..‌ದೇಶದ ಮುಕುಟ ಲಡಾಖ್ ರಕ್ಷಣೆಗೆ ಕೈಜೋಡಿಸಿ

Share

ದೇಶದ ಮುಕುಟಮಣಿಯಂತಿರುವ ಲಡಾಖ್(save Ladakh) ರಕ್ಷಣೆಗೆ ಖ್ಯಾತ ಪರಿಸರವಾದಿ(social reformist) ಸೋನಮ್ ವಾಂಗ್ಚುಕ್(Sonam Wangchuk) ನೇತೃತ್ವದಲ್ಲಿ ನಡೆಯುತ್ತಿರುವ ಕಠಿಣ ಉಪವಾಸ ಸತ್ಯಾಗ್ರಹಕ್ಕೆ(climate fast) ಬೆಂಬಲ ಸೂಚಿಸೋಣ. ಮಾರ್ಚ್ 24 ರ ಭಾನುವಾರ ಶಿವಮೊಗ್ಗದಲ್ಲಿ ನಡೆಯುವ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪರಿಸರಪ್ರೇಮಿಗಳು ಪಾಲ್ಗೊಳ್ಳುವುದರ ಮೂಲಕ…..

ಖ್ಯಾತ ಪರಿಸರವಾದಿ ಸೋನಂ ವಾಂಗ್ಚುಕ್ ಅವರು ಲೇಹ್ ನಗರದಲ್ಲಿ ವಿಪರೀತ ಥರಗುಟ್ಟುವ ಚಳಿ ನಡುವೆ ಕಳೆದ ಎರಡು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೇಂದ್ರಾಡಳಿತ ಲಡಾಕ್ ಪ್ರದೇಶವನ್ನು ಕೈಗಾರಿಕಾ ಹಾಗೂ ಗಣಿ ಲಾಬಿಗಳಿಂದ ರಕ್ಷಿಸಲು ಸಾಂವಿಧಾನಿಕ ರೀತಿಯ ಖಾತ್ರಿ ಬಯಸಿ ಅವರು ಈ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಸ್ಥಳೀಯ ನೂರಾರು ಜನರು ಬೆಂಬಲ ನೀಡುತ್ತಿದ್ದಾರೆ.

ಲಡಾಕ್ ಪರಿಸರ ಹಾಗೂ ಅದರ ಬುಡಕಟ್ಟು ಸಂಸ್ಕೃತಿಯನ್ನು ರಕ್ಷಿಸುವುದಾಗಿ ಕೇಂದ್ರ ಸರ್ಕಾರ ವಾಗ್ದಾನ ಮಾಡಿತ್ತು. ಈ ವಾಗ್ದಾನ ನೆನಪಿಸುವುದಕ್ಕೋಸ್ಕರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮೈನಸ್ 12 ಡಿಗ್ರಿಗಿಂತಲೂ ಕಡಿಮೆ ತಾಪಮಾನದಲ್ಲಿ ಸುಮಾರು 250 ಜನರೊಂದಿಗೆ ರಾತ್ರಿ ಕಳೆಯುತ್ತಿರುವ ವಾಂಗ್ಚುಕ್, ಸರ್ಕಾರ ನೀಡಿರುವ ವಾಗ್ದಾನವನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಮಾರ್ಚ್ ಆರರಂದು ವಾಂಗ್ಚುಕ್ ಅವರು ಮೆರವಣಿಗೆಗೆ ಚಾಲನೆ ನೀಡುವ ಮೂಲಕ ಈ ಪ್ರತಿಭಟನೆ ಆರಂಭಿಸಿದ್ದರು. ಅಂದು ಅವರು ನೂರಾರು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಇನ್ನು ಪ್ರತಿ 21 ದಿನಗಳಂತೆ ಹಂತ ಹಂತವಾಗಿ ಈ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ಘೋಷಿಸಿದ್ದಾರೆ.

ಹಿಮಾಲಯ ತಪ್ಪಲಿನ ಅತಿ ಸೂಕ್ಷ್ಮವಾದ ಈ ಪ್ರದೇಶದಲ್ಲಿ ಪರಿಸರಕ್ಕೆ ಮಾರಕವಾಗುವ ಯಾವುದೇ ಕಾರ್ಯ ಚಟುವಟಿಕೆಗಳು ಇಡೀ ದೇಶದ ವಾತಾವರಣದ ಮೇಲೆ ಪರಿಣಾಮ ಬೀರುವುದರಿಂದ ನಾವೆಲ್ಲರೂ ಈ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸಾಂಕೇತಿಕ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳೋಣ. ಮಹಾತ್ಮ ಗಾಂಧಿ ಪ್ರತಿಮೆ ಬಳಿ  ಶಿವಮೊಗ್ಗದಲ್ಲಿ.

A large number of people including women, men, children, youth, students, and prominent people of Ladakh gathered at HIAL Leh in support of Sonam Wangchuk, who has been on Climate Fast for last five days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago