ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.
ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.
ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.
ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.
ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…