Advertisement
MIRROR FOCUS

ಸಾಧಕರ ಜನ್ಮದಿನದ ಪ್ರಯುಕ್ತ ಗಿಡ ನೆಡುವಿಕೆ ಅಭಿಯಾನ

Share

ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಜನ್ಮದಿನದ ಅಂಗವಾಗಿ ಈಶ್ವರಿ ಸೋಷಿಯಲ್ ಟ್ರಸ್ಟ್ ನಿಂದ ಚಾಮರಾಜನಗರ ಜಿಲ್ಲೆ ಯಳಂದೂರು ಬಳಿಯ ಯರಿಯೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಟ್ರಸ್ಟ್‌ ವತಿಯಿಂದ ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ  ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಈ ಯೋಜನೆಗೆ ಚಾಲನೆ ನೀಡಿದರು.

ಯೋಜನೆಗೆ ಚಾಲನೆ ನೀಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ, ನಗರೀಕರಣ ಮತ್ತು ಆಧುನೀಕರಣದ ಭರಾಟೆಯಲ್ಲಿ ಶುದ್ಧ ಗಾಳಿ, ನೆರಳು, ನೀರು ತುಂಬ ಬೆಲೆಯುಳ್ಳ ವಸ್ತುವಾಗಿವೆ. ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಾ ಸದ್ದಿಲ್ಲದೆ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಯ ಕಾರ್ಯ ಸ್ವಾಗತಾರ್ಹವಾದದ್ದು. ಇಂತಹ ಪರಿಸರ ಪ್ರೇಮಿಗಳನ್ನು ಪ್ರೋತ್ಸಾಹಿಸುವ ಮೂಲಕ ಪರಿಸರ ರಕ್ಷಣೆಗೆ ಎಲ್ಲರೂ ತಮ್ಮ ಬದ್ಧತೆ ಪ್ರದರ್ಶಿಸಬೇಕು ಎಂದರು.

ಕಾರಾಪುರ ಮಠದ ಬಸವರಾಜ ಸ್ವಾಮಿ ಒಡೆಯರ್, ಪರಿಸರದಲ್ಲಿ ದಿನೇ ದಿನೇ ಇಂಗಾಲದ ಪರಿಣಾಮ ಹೆಚ್ಚುತ್ತಿದ್ದು, ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಭವಿಷ್ಯದಲ್ಲಿ ಇದರಿಂದ ಉಂಟಾಗುವ ತೀವ್ರತರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪರಿಸರ ರಕ್ಷಣೆಯೊಂದೇ ದಾರಿ ಎಂದು ತಿಳಿಸಿದರು.

ಸ್ಥಳೀಯರಾದ ಡಾ.ಶ್ರೀಕಂಠಮೂರ್ತಿ, ಯರಿಯೂರಿನಲ್ಲಿ 250 ಗಿಡಗಳನ್ನು ನೆಟ್ಟು ಗ್ರಾಮವನ್ನು ಹಸಿರುಮಯ ಮಾಡಲು ಮುಂದಾಗಿರುವ ಕ್ರಮ ಸ್ವಾಗತಾರ್ಹವಾದದ್ದು ಎಂದು ಮೆಚ್ಚುಗೆ ಸೂಚಿಸಿದರು.

ಟ್ರಸ್ಟ್ ಅಧ್ಯಕ್ಷ ಸಿ.ಎಂ.ವೆಂಕಟೇಶ್, ಸಮಾಜ ಸೇವಕರು, ಗಣ್ಯರು, ಹೋರಾಟಗಾರರ ಜನ್ಮದಿನದಂದು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಟ್ರಸ್ಟ್, ಪರಿಸರ ರಕ್ಷಣೆಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

2 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

2 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

6 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

16 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

17 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

23 hours ago