ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |

February 17, 2025
11:20 PM
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.

ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಯುನಿಸೆಫ್‌ನ  ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.……… ಮುಂದೆ ಓದಿ…….

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ  ಜಂಟಿ ಆಶ್ರಯದಲ್ಲಿ ಆಯೋಜಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ ಸರ್ವರ ಸಹಕಾರವನ್ನು ಅಗತ್ಯ ಎಂದರು.

ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು. ಎಸ್.ಡಿ.ಎಂ. ಕಾಲೇಜಿನ ಇನ್ನೂರು ವಿದ್ಯಾರ್ಥಿಗಳು ನೀರು ಉಳಿಸಿ ಜಾಥಾದಲ್ಲಿ ಭಾಗವಹಿಸಿದರು.  ಮಡಂತ್ಯಾರು ಸೇಕ್ರೆಡ್‌ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜಲಸಂರಕ್ಷಣೆ ತಜ್ಞರಾದ ಡಾ. ಜೋಸೆಫ್, ಎನ್. ಎಂ. ನೀರುಸಂರಕ್ಷಣೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಪ್ರೊ. ದೀಪಾ, ಆರ್.ಪಿ., ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾಕಿರಣ್ ಕಾರಂತ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group