ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

April 25, 2023
6:30 PM

ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ· ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಹೇಳಿದೆ.

2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ನ್ಯಾ. ಕೆ.ಎಂ. ಜೋಸೆಫ್‌ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮೇ 9 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ. 

ಅಫಿಡವಿಟ್‌ ಸಿದ್ಧವಾಗಿದೆ. ಆದರೆ ಸಾಂವಿಧಾನಿಕ ಪೀಠದ ವಿಚಾರಣೆಯಲ್ಲಿದ್ದೇನೆ. ಹೀಗಾಗಿ ವಿಚಾರಣೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅರ್ಜಿದಾರ ಪರ ವಕೀಲರಾದ ದುಷ್ಯಂತ್‌ ದವೆ, ಇದು ಅತ್ಯಂತ ಮಹತ್ವದ ಪ್ರಕರಣ. ವಿಚಾರಣೆ ಮುಂದೂಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು.

ಪೀಠವು, ವಾದ ಪ್ರತಿವಾದ ಆಲಿಸಿದ ಬಳಿಕ ಮೇ 9 ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆಗೆ ಮುಂದೂಡಿಕೆ ಆಕ್ಷೇಪ ಹಿನ್ನಲೆ ಹಳೆ ಆದೇಶ ಮುಂದುವರಿಸುವುದಾಗಿ ಕೋರ್ಟ್‌ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror