Advertisement
ಸುದ್ದಿಗಳು

ಹಿಜಾಬ್‌ ವಿವಾದ | ಭಿನ್ನ ತೀರ್ಪು | ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಕೆ |

Share

ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ಭಿನ್ನ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ.  ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.

ಹಿಜಾಬ್‌ ಕುರಿತು  ಇಂದು ಅಂತಿಮ ತೀರ್ಪು ಪ್ರಕಟವಾಗಬೇಕಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಮೂರ್ತಿಗಳು ಹಿಜಾಬ್ ವಿವಾದ ಕುರಿತು ಭಿನ್ನ ತೀರ್ಪುಗಳನ್ನು ನೀಡಿರುವುದರಿಂದ ನಿರ್ದಿಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.  ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಉಲ್ಲೇಖಿಸಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತ ತಳ್ಳಿಹಾಕಿದರೆ ನ್ಯಾಯಮೂರ್ತಿ ಸುಧಾಂಶು ಧುನಿಯಾ ಮೇಲ್ಮನವಿ ಸಲ್ಲಿಕೆಯನ್ನು ಪುರಸ್ಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

9 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

18 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago