MIRROR FOCUS

ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ವಂಚನೆ | ಈ ಬಗ್ಗೆ ಎಚ್ಚರವಹಿಸುವಂತೆ ವಿಎಚ್​​ಪಿ ಎಚ್ಚರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇವರ ಹೆಸರಿನಲ್ಲಿ ಪಂಗನಾಮ ಹಾಕುವವರಿಗೇನು ಕಡಿಮೆ ಇಲ್ಲ. ಈಗ ಶ್ರೀರಾಮ ಮಂದಿರ ಉದ್ಘಾಟನೆ ಒಂದು ನೆಪವಾಗಿದೆ. ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ (Ram mandir) ಉದ್ಘಾಟನೆಗೆ ಇನ್ನೇನು ಕೆಲವೇ ವಾರಗಳು ಉಳಿದಿದ್ದು ದೇಗುಲ ನಿರ್ಮಾಣಕ್ಕೆ ಬೆಂಬಲ ನೀಡಲು ದೇಣಿಗೆ ಸಂಗ್ರಹಿಸುವ(Donation collection) ನೆಪದಲ್ಲಿ ಕೆಲವರು ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಗರಣ ಬಗ್ಗೆ ವಿಶ್ವ ಹಿಂದೂ ಪರಿಷತ್ (VHP) ಉತ್ತರ ಪ್ರದೇಶ ಪೊಲೀಸರಿಗೆ(Police) ದೂರು ನೀಡಿದೆ. ವಿಎಚ್‌ಪಿ ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನೂ ನೀಡಿದ್ದು, ಜನರು ಈ ವಂಚನೆಗೆ ಬಲಿಯಾಗಬೇಡಿ ಎಂದು ಜನರಿಗೆ ಹೇಳಿದೆ.

Advertisement
Advertisement

ಎಚ್ಚರಿಕೆ..!! ಕೆಲ ವ್ಯಕ್ತಿಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ವಿಎಚ್‌ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ಈ ಸಂದರ್ಭಕ್ಕಾಗಿ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಂಬಿಕೆಯ ವಿಷಯದಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಉತ್ತರ ಪ್ರದೇಶ ಡಿಜಿಪಿ ಮತ್ತು ಲಖನೌ ಐಜಿಗೆ ದೂರು ನೀಡಿರುವುದಾಗಿ ಅವರು ಹೇಳಿದ್ದಾರೆ.

ವಿಎಚ್‌ಪಿ ವಕ್ತಾರರು ವಿಡಿಯೊ ಸಂದೇಶವನ್ನು ಸಹ ಬಿಡುಗಡೆ ಮಾಡಿದ್ದು, ದೇವಸ್ಥಾನಕ್ಕೆ ದೇಣಿಗೆಯ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡಲು ಯತ್ನಿಸುತ್ತಿರುವ ದಂಧೆಯ ಬಗ್ಗೆ ತಮಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ.  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿಸಿ ನಕಲಿ ಕ್ಯೂಆರ್ ಕೋಡ್ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಹಣ ವಸೂಲಿ ಮಾಡಲು ಕೆಲವರು ಯತ್ನಿಸುತ್ತಿದ್ದಾರೆ ಎಂದು ನಮಗೆ ಮಾಹಿತಿ ನೀಡಲಾಗಿದೆ ಎಂದು ಬನ್ಸಾಲ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಯಾರಿಗೂ ಯಾವುದೇ ರೀತಿಯಲ್ಲಿ ಹಣ ಸಂಗ್ರಹ ಮಾಡುವ ಹಕ್ಕನ್ನು ನೀಡಿಲ್ಲ. ಇಂತಹ ಪ್ರಯತ್ನಗಳನ್ನು ಮಾಡುವವರು ಜನರನ್ನು ವಂಚಿಸಲು ಬಯಸುತ್ತಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತಕ್ಷಣವೇ ನಾನು ಗೃಹ ಸಚಿವಾಲಯ, ಡಿಜಿಪಿ ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ. ಜನರು ಕೂಡ ಜಾಗರೂಕರಾಗಿರಬೇಕು, ಇದು ಹಬ್ಬದ ಸಮಯ, ನಾವು ಆಹ್ವಾನಗಳನ್ನು ನೀಡಲಿದ್ದೇವೆ ಮತ್ತು ಯಾವುದೇ ರೀತಿಯ ದೇಣಿಗೆ ಅಥವಾ ಉಡುಗೊರೆಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿಎಚ್​​ಪಿ ಪ್ರಕಾರ, ಅಭಿಷೇಕ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಯೋಧ್ಯೆ ದೇವಾಲಯದ ಅಭಿವೃದ್ಧಿಗೆ ಹಣವನ್ನು ಕೇಳಿದ್ದಾರೆ  ಎಂದು ವಿಎಚ್‌ಪಿ ಸದಸ್ಯ ಗಿರೀಶ್ ಭಾರದ್ವಾಜ್ ಉತ್ತರ ಪ್ರದೇಶ ಡಿಜಿಪಿ ಮತ್ತು ಐಜಿಗೆ ಪತ್ರ ಬರೆದಿದ್ದಾರೆ.

Advertisement

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಅಥವಾ ಜನರಿಗೆ ದೇವಸ್ಥಾನಕ್ಕೆ ಹಣ ಸಂಗ್ರಹಿಸಲು ಅಧಿಕಾರವಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿರುವ ಟ್ರಸ್ಟ್ ಆಗಿದೆ. ಭಕ್ತರನ್ನು ವಂಚಿಸಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಅಕ್ರಮವಾಗಿ ಹಣ ವಸೂಲಿ ಮಾಡುವ ದುರುದ್ದೇಶ ಕಾಣುತ್ತಿದೆ. ರಾಮಮಂದಿರ ಉದ್ಘಾಟನೆಗೆ ಇಡೀ ರಾಷ್ಟ್ರವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಇಂತಹ ಅವ್ಯವಹಾರಗಳನ್ನು ನಿಲ್ಲಿಸಬೇಕು. ನಿಮ್ಮ ಅವಗಾಹನೆಗಾಗಿ ನಾನು ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದೇನೆ. ದಯವಿಟ್ಟು ಅಗತ್ಯ ಕ್ರಮ ಕೈಗೊಳ್ಳಿ ಎಂದು ಭಾರದ್ವಾಜ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

–  ಅಂತರ್ಜಾಲ ಮಾಹಿತಿ

It is alleged that some people are cheating people on the pretext of donation collection. The Vishwa Hindu Parishad (VHP) has lodged a complaint with the Uttar Pradesh Police about this scam. The VHP has also issued a warning on social media, asking people not to fall prey to this scam.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

5 minutes ago

ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌…

55 minutes ago

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…

2 hours ago

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

7 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

14 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

14 hours ago