16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ ಹಾಗೂ ಮುಂಜಾನೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ವಾತಾವರಣವು ಇನ್ನು 2 ಅಥವಾ 3 ದಿನಗಳವರೆಗೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಈಗಿನಂತೆ ಈ ವಾತಾವರಣವು ಇನ್ನು 2 ಅಥವಾ 3 ದಿನಗಳ ಕಾಲ ಇರಲಿದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು.
ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ದುರ್ಬಲಗೊಂಡು ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 18ರ ಸಮಯಕ್ಕೆ ಉತ್ತರಾಖಂಡ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…