ಹವಾಮಾನ ವರದಿ | 13-08-2024 | ರಾಜ್ಯದ ಅಲ್ಲಲ್ಲಿ ಸಂಜೆಯ ವೇಳೆಗೆ ಮಳೆ ನಿರೀಕ್ಷೆ | ಆ.19 ರಿಂದ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ |

August 13, 2024
1:56 PM
ಈಗಿನಂತೆ ಆಗಸ್ಟ್ 18ರ ತನಕ ರಾಜ್ಯದ ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. (ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಹೆಚ್ಚಿರಬಹುದು). ಉತ್ತರ ಕನ್ನಡ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ (ಸಾಮಾನ್ಯ), ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ 18ರ ತನಕ ರಾಜ್ಯದ ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಹೆಚ್ಚಿನ ಮಳೆ ದಕ್ಷಿಣ ಒಳನಾಡು ಭಾಗಗಳಲ್ಲಿ).ಆಗಸ್ಟ್ 19ರಿಂದ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror