14.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. (ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಹೆಚ್ಚಿರಬಹುದು). ಉತ್ತರ ಕನ್ನಡ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ (ಸಾಮಾನ್ಯ), ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 18ರ ತನಕ ರಾಜ್ಯದ ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಹೆಚ್ಚಿನ ಮಳೆ ದಕ್ಷಿಣ ಒಳನಾಡು ಭಾಗಗಳಲ್ಲಿ).ಆಗಸ್ಟ್ 19ರಿಂದ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…