#WeatherMirror | ಕರಾವಳಿ, ಮಲೆನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ | ಮುಂಗಾರು ದುರ್ಬಲತೆ ಮುಂದುವರಿಕೆ |

August 27, 2023
1:02 PM
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಿನಕಳೆದಂತೆ ಮುಂಗಾರು ಮಳೆ ಕ್ಷೀಣವಾಗುತ್ತಿದೆ. ರಾಜ್ಯದ ಬಹುತೇಕ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗೆ ಮುಂದುವರೆದರೆ, ರಾಜ್ಯದ ಬಹು ಪಾಲು ಭಾಗಗಳಲ್ಲಿ ಮಳೆ ಇಲ್ಲದೆ, ಬೆಳೆ ಬೆಳೆಯೋದೇ ಕಷ್ಟವಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಂತೂ ಒಣಗಿ ಹೋಗಿದೆ. ಕುಡಿಯುವ ನೀರಿಗೂ ತಾತ್ವರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು(ದಕ್ಷಿಣ), ಹಾಸನ, ಮೈಸೂರು (ಉತ್ತರ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೂ ಸೆಪ್ಟೆಂಬರ್ 4ರಿಂದ ಕರಾವಳಿ ತೀರದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಬರಹ :
ಸಾಯಿಶೇಖರ್‌ ಕರಿಕಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
November 5, 2026
6:15 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror