ದಿನಕಳೆದಂತೆ ಮುಂಗಾರು ಮಳೆ ಕ್ಷೀಣವಾಗುತ್ತಿದೆ. ರಾಜ್ಯದ ಬಹುತೇಕ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗೆ ಮುಂದುವರೆದರೆ, ರಾಜ್ಯದ ಬಹು ಪಾಲು ಭಾಗಗಳಲ್ಲಿ ಮಳೆ ಇಲ್ಲದೆ, ಬೆಳೆ ಬೆಳೆಯೋದೇ ಕಷ್ಟವಾಗಿದೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಂತೂ ಒಣಗಿ ಹೋಗಿದೆ. ಕುಡಿಯುವ ನೀರಿಗೂ ತಾತ್ವರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು(ದಕ್ಷಿಣ), ಹಾಸನ, ಮೈಸೂರು (ಉತ್ತರ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೂ ಸೆಪ್ಟೆಂಬರ್ 4ರಿಂದ ಕರಾವಳಿ ತೀರದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…