Advertisement
ಸುದ್ದಿಗಳು

ರೈತರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಮಾಹಿತಿ

Share

ರೈತನಿಗೆ ಸರ್ಕಾರದಿಂದ ಹಲವಾರು ಬಗ್ಗೆಯ ಯೋಜನೆಗಳು ಜಾರಿಯಲ್ಲಿದೆ.  ಆ ಯೋಜನೆಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು..?

ಕಿಸಾನ್ ಕ್ರೆಡಿಟ್ ಕಾರ್ಡ್: ಈ ಯೋಜನೆ ಅಡಿಯಲ್ಲಿ ಬಡ್ಡಿ ದರ ಕಡಿಮೆ ಇರುವುದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬೀತ್ತನೆ ಬೀಜ, ರಸಗೊಬ್ಬರ ಮತ್ತು ಇತರ ವೆಚ್ಚಗಳಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು.
ಮಣ್ಣಿನ ಆರೋಗ್ಯ ಕಾರ್ಡ್: ಈ ಯೋಜನೆಯು 2015ರಲ್ಲಿ ಜಾರಿಗೊಳಿಸಲಾಯಿತು. ಮಣ್ಣಿನ ಫಲವತ್ತತೆಯನ್ನು ಸುಧಾರಿಸಲು ಮತ್ತು ಕೃಷಿ ಪದ್ಧತಿಗಳನ್ನು ಸುಧಾರಿಸಲು ಇದು ಸಹಾಯ ಮಾಡುತ್ತದೆ. ಹೇಗೆಂದರೆ ಮಣ್ಣಿನ ಫಲತ್ತತೆಯನ್ನು ಆಧಾರಿಸಿ ಸೂಕ್ತ ರಸಗೊಬ್ಬರ ಬಳಕೆ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ರಾಷ್ಟ್ರೀಯ ಕೃಷಿ ಮಾರುಕಟ್ಟೆ: ಇದೊಂದು ಡಿಜಿಟಲ್ ವೇದಿಕೆಯಾಗಿದ್ದು, ಇದರಿಂದ ದೇಶದಾದ್ಯಂತ ಇರುವ ಕೃಷಿ ಮಾರುಕಟ್ಟೆಗಳನ್ನು ಒಂದೇ ಜಾಲದಲ್ಲಿ ಸಂಪರ್ಕಿಸುತ್ತದೆ. ಇದು ರೈತರನ್ನು ಸಗಟು ಖರೀದಿದಾರರೊಂದಿಗೆ ಸಂಪರ್ಕಿಸುವುದಲ್ಲದೇ ಅವರ ಉತ್ಪನ್ನಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡಲು ಅನುವು ಮಾಡಕೊಡುತ್ತದೆ. ಬೃಹತ್ ಮಾರುಕಟ್ಟೆಗೆ ಪ್ರವೇಶವನ್ನು ಒದಗಿಸುವುದು, ರೈತ ಮತ್ತು ಖರೀದಿದಾರರ ನಡುವೆ ನೇರ ಮಾತುಕತೆಯನ್ನು ಉತ್ತೇಜಿಸುವುದು. ಮಾರುಕಟ್ಟೆ ವಿಸ್ತರಣೆಯಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ: ರೈತರಿಗೆ ಆರ್ಥಿಕ ನೆರವು ನೀಡಿ ಅವರ ಜೀವನಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದು ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು.
ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ: ಅನಿರೀಕ್ಷಿತ ಘಟನೆಗಳಿಂದ ಉಂಟಾದ ಬೆಳೆ ನಷ್ಟಕ ಆರ್ಥಿಕ ಪರಿಹಾರ ನೀಡಲು ಭಾರತ ಸರ್ಕಾರ ಆರಂಭಿಸಿರುವ ಕೃಷಿ ವಿಮಾ ಯೋಜನೆ ಇದಾಗಿದೆ. ನೈಸರ್ಗಿಕ ವಿಕೋಪಗಳು, ರೋಗಬಾಧೆ, ಅತಿವೃಷ್ಟಿ, ಬರ, ನೆರೆ ಮುಂತಾದ ಕಾರಣಗಳಿಂದ ಬೆಳೆ ನಷ್ಟವಾದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ಋಕ್ಷಣೆ ನೀಡುವುದು ಇದರ ಉದ್ದೇಶ.
ಪರಂಪರಾಗತ ಕೃಷಿ ವಿಕಾಸ ಯೋಜನೆ: ಸಾವಯವ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಭಾರತ ಸರ್ಕಾರ ಒಂದು ಉಪಕ್ರಮ. ಇದು ಮಣ್ಣಿನ ಫಲವತ್ತತೆಯನ್ನು ಸುಧಾರಿಸಲು ಸಹಾಯಕವಾಗಿದೆ.
ಪ್ರಧಾನ ಮಂತ್ರಿ ಕೃಷಿ ಸಂಚಯಿ ಯೋಜನೆ: ದೇಶದಲ್ಲಿ ಹೆಚ್ಚಿನ ಕೃಷಿ ಮಳೆ ನೀರನ್ನೇ ಅವಲಂಬಿಸಿದೆ. ಇದರಿಂದಾಗಿ ಬಹುತೇಕ ರೈತರು ಬೇಸಿಗೆಯಲ್ಲಿ ನೀರಿನ ಕೊರತೆಯನ್ನು ಎದುರಿಸಬೇಕಾಗುತ್ತಿದೆ. ಮಳೆನೀರು ಕೊಯ್ಲಿನ ಸಹಾಯದಿಂದ ರಕ್ಷಣಾತ್ಮಕ ನೀರಾವರಿಯನ್ನು ಉತ್ತೇಜಿಸುವುದು ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಗುರಿಯಾಗಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಈ ಯೋಜನೆಯ ಮೂಲಕ ಕೃಷಿಯಲ್ಲಿ ನೂತನ ತಂತ್ರಜ್ಞಾನ ಅಳವಡಿಕೆ, ಉದ್ಯಮಶೀಲತೆ ಮತ್ತು ನವೋಧ್ಯಮಗಳಿಗೆ ಆರ್ಥಿಕ ನೆರವು ನೀಡುತ್ತದೆ.
ಪಿಎಂ ಕಿಸಾನ್ ಪಿಂಚಣಿ ಯೋಜನೆ: ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಯು ಸಾಮಾಜಿಕ ಭದ್ರತಾ ಉಪಕ್ರಮವಾಗಿದೆ. ಈ ಯೋಜನೆಯಡಿಯಲ್ಲಿ ಅರ್ಹ ಸಣ್ಣ ಮ್ತು ಅತೀ ಸಣ್ಣ ರೈತರಿಗೆ ಪಿಂಚಣಿ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ದೇಶದ ಮೀನುಗಾರಿಕಾ ಕ್ಷೇತ್ರ ಪ್ರಗತಿಗಾಗಿ ರೂಪಿಸಿರುವ ಯೋಜನೆ ಇದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾದಲ್ಲಿ ಪಾನ್‌ ಬೀಡಾಕ್ಕೆ ಬಳಕೆ ಮಾಡುವ ಅಡಿಕೆ  ಬೆಲೆ…

11 hours ago

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

19 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

19 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

20 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

20 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

20 hours ago