2019-20 ರ ಸಾಲಿನ ಪೋಸ್ಟ್ ಮೆಟ್ರಿಕ್, ಪ್ರೀ ಮೆಟ್ರಿಕ್ , ಮೆರಿಟ್ – ಕಮ್ – ಮೀನ್ಸ್ ವಿದ್ಯಾರ್ಥಿ ವೇತನ ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದ ಬಗ್ಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ನಿಯೋಗವು ದೆಹಲಿಯಿಂದ ಪುತ್ತೂರಿಗೆ ಆಗಮಿಸಿದ ಐ.ಐ.ಟಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ,ಮನವಿ ಸಲ್ಲಿಸಿದರು.
ಕಳೆದ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನವು ಇನ್ನೂ ಕೂಡ ವಿದ್ಯಾರ್ಥಿಗಳಿಗೆ ಮಂಜೂರಾಗದೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕೋರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಈ ಸಲದ ಶಾಲಾ,ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದೆ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂತಕ್ಕೀಡಾಗಿದ್ದಾರೆ. ಆದ್ದರಿಂದ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಶೀಘ್ರ ಮಂಜೂರು ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸವಾದ್ ಕಲ್ಲರ್ಪೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸುಳ್ಯ ಅಧ್ಯಕ್ಷ ಅರ್ಫಿದ್ ಅಡ್ಕಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷ ಇಮ್ರಾನ್ ಕಲ್ಲರ್ಪೆ , ಉಪ್ಪಿನಂಗಡಿ ಏರಿಯಾ ಅಧ್ಯಕ್ಷ ರಿಝ್ವಾನ್, ಸಬೀರ್ ಕಲ್ಲರ್ಪೆ, ಸಂಶೀರ್ ಸವಣೂರು ಉಪಸ್ಥಿತರಿದ್ದರು.
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…