ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಮಳೆಯ ಪ್ರಮಾಣ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ ಜು.12 ರಿಂದ ಕಾರ್ಯ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್’
ನಾಳೆ (12/07/2022) ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಇಲ್ಲ.
ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ತರಗತಿಗಳನ್ನು ಪುನರಾರಂಭಿಸಲಾಗುವುದು.
ಯಾವುದೇ ಸಮಸ್ಯೆಗಳಿದ್ದಲ್ಲಿ, ಡಿಡಿಪಿಐ/ಸಿಇಒ ಜಿಲ್ಲಾ ಪಂಚಾಯತ್/ಡಿಸಿ ಕಚೇರಿಯಿಂದ ಪೂರ್ವಾನುಮತಿ ಪಡೆದು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು.Advertisement— @DKDCOFFICIAL (@DCDK9) July 11, 2022