ಶಾಲಾ ಪಠ್ಯಪುಸ್ತಕ ಪರಿಷ್ಕರಣೆ | ಯಾವೆಲ್ಲಾ ಪಠ್ಯಗಳಿಗೆ ಬೀಳಲಿದೆ ಕತ್ತರಿ?| ಪರಿಷ್ಕರಣೆಯ ಅಂತಿಮ ವರದಿ ಸಿದ್ಧ

June 15, 2023
10:42 AM

ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು ಕೈ ಬಿಡಲಾಗುವುದು ಎಂದು ಹೇಳಿತ್ತು. ಅದರಂತೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿವಾದಿತ ಪಠ್ಯ ವಿಷಯಗಳನ್ನು ಪರಿಷ್ಕರಿಸಲು ಮುಂದಾಗಿದ್ದಾರೆ.

ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror