ಕಳೆದ ವರ್ಷ ಬಿಜೆಪಿ ಸರ್ಕಾರ ಪರಿಷ್ಕರಿಸಿದ್ದ ಪಠ್ಯ ಪುಸ್ತಕ ವಿಷಯದ ಮೇಲೆ ಭಾರಿ ಚರ್ಚೆ ಹಾಗೂ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿವಾದಿತ ಪಠ್ಯಗಳನ್ನು ಕೈ ಬಿಡಲಾಗುವುದು ಎಂದು ಹೇಳಿತ್ತು. ಅದರಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿವಾದಿತ ಪಠ್ಯ ವಿಷಯಗಳನ್ನು ಪರಿಷ್ಕರಿಸಲು ಮುಂದಾಗಿದ್ದಾರೆ.
ಕರ್ನಾಟಕದ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳನ್ನು ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದ್ದು, ಇದೀಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿವಾದಿತ ಪಠ್ಯದ ಅಂತಿಮ ವರದಿ ಸಿದ್ಧಪಡಿಸಿದ್ದು, ಇಂದಿನ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಅಲ್ಲದೇ ಕ್ಯಾಬಿನೆಟ್ನಲ್ಲಿ ಚರ್ಚಿಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈಗಾಲೇ ಶಾಲೆಗಳು ಆರಂಭವಾಗಿದ್ದು, ಪುಸ್ತಕಗಳು ಮುದ್ರಣಗೊಂಡು ಶಾಲೆಗಳಿಗೂ ತಲುಪಿವೆ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ತಿದ್ದುಪಡಿ ಮಾಡಲು ಸಮಯ ಇಲ್ಲವೆಂದು ಕೆಲ ಪಠ್ಯವನ್ನು ಬೋಧನೆ ಮಾಡದಂತೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ನಮ್ಮ ಶಿಕ್ಷಕಿಯರು ರಜೆ ಇಲ್ಲದೆ ದಣಿಯುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಮನೆ ಬಿಟ್ಟರೆ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಯಲ್ಲೇ ನೈರುತ್ಯಕ್ಕೆ ಚಲಿಸಿ ಮುಂದಿನ 2…
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಿರೇನಗನೂರು ಗ್ರಾಮದ ರೈತ ಪ್ರದೀಪ್ ಗೌಡ ಟರ್ಕಿ…
ಅಚ್ಚ ಬಿಳಿಯ ಹೂಗಳಿಂದ ನಳನಳಿಸುವ ತುಂಬೆ ಗಿಡವು ಶಿವ ದೇವರಿಗೆ ಪ್ರೀತಿಯ ಹೂವಂತೆ.…
ಮಲೆನಾಡು ಜನರಿಗೆ ಭೂಮಿ ಹುಣ್ಣಿಮೆ ಸಂತಸದ ಹಬ್ಬ. ತೆನೆ ತುಂಬಿದ ಭತ್ತಕ್ಕೆ ಸೀಮಂತ…
ಕಳೆದ 11 ವರ್ಷಗಳಲ್ಲಿ ದೇಶವು ಗಮನಾರ್ಹ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ…