ತುಮಕೂರು ಜಿಲ್ಲೆ ಇದೀಗ ಸ್ವಚ್ಛತೆಯಲ್ಲಿ ಗಮನ ಸೆಳೆಯುತ್ತಿದೆ. ತುಮಕೂರು ಜಿಲ್ಲೆಯ ತಿಪಟೂರು ನಗರಸಭೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಿದೆ. ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆಯಡಿ ಮತ್ತು ರಾಜ್ಯ ಸರ್ಕಾರ ಹಲವು ಅನುದಾನಗಳ ಸದ್ಬಳಕೆಯಿಂದ ವೈಜ್ಞಾನಿಕವಾಗಿ ತ್ಯಾಜ್ಯ ಸಂಸ್ಕರಣೆ ಮಾಡಲಾಗುತ್ತಿದೆ. ಜೊತೆಗೆ ಕಾರ್ಮಿಕರ ಆರೋಗ್ಯ ಕುರಿತು ಹೆಚ್ಚಿನ ಒತ್ತು ನೀಡಲಾಗಿತ್ತು. ನಿತ್ಯ ಪೌಷ್ಟಿಕ ಆಹಾರ, ಮೂಲಸೌಕರ್ಯಗಳನ್ನು ಒದಗಿಸಲಾಗಿದೆ.
ಇಲ್ಲಿ ಕಾರ್ಮಿಕರು ನಿತ್ಯ ಮುಂಜಾನೆಯೇ ರಸ್ತೆಗಳನ್ನು ಗುಡಿಸಿ, ಮನೆಗಳಿಂದಲೇ ಕಸ ವಿಂಗಡಿಸಿ ಸುಸಜ್ಜಿತವಾಗಿ ಸಂಗ್ರಹಿಸಲಾಗುತ್ತದೆ. ಬಳಿಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಮರುಬಳಕೆ ಮಾಡಲಾಗುತ್ತದೆ. ಹಸಿಕಸ ನಿರ್ವಹಣೆಗಾಗಿ 14 ಎಕರೆ ಪ್ರದೇಶದಲ್ಲಿ ಕಾಂಪೋಸ್ಟ್ ಯಾರ್ಡ್ ತೆರೆದಿದ್ದು, ಯಂತ್ರೋಪಕರಣಗಳ ಮೂಲಕ ವೈಜ್ಞಾನಿಕವಾಗಿ ಕಾಂಪೋಸ್ಟ್ ಮಾಡಲಾಗುತ್ತದೆ. ಇಲ್ಲಿ ತಯಾರಾದ ಗೊಬ್ಬರವನ್ನು ಮಾರಾಟ ಮಾಡಲು ರೈತರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ ನಗರಸಭೆ ಅಧಿಕಾರಿಗಳು ಮನೆಮನೆಗೆ ತೆರಳಿ ಸ್ವಚ್ಛತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಡುವುದರ ಜೊತೆಗೆ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ನೀಡಲಾಗುತ್ತಿದೆ.
ನಿತ್ಯ ಹಸಿಕಸ, ಒಣಕಸವನ್ನು ಬೇರ್ಪಡಿಸಿ ನೀಡಲಾಗುತ್ತಿದ್ದು, ಮನೆ ಬಾಗಿಲಿಗೆ ನಗರ ಪಾಲಿಕೆ ವಾಹನ ಬಂದು ತ್ಯಾಜ್ಯ ಸಂಗ್ರಹಿಸುತ್ತಾರೆ. ಇದರಿಂದ ಜನನಿಬಿಡ ಪ್ರದೇಶಗಳನ್ನು ಸ್ವಚ್ಛವಾಗಿಡಲು ಸಹಕಾರಿಯಾಗಿದೆ. ಪೌರಕಾರ್ಮಿಕರು ಎಲ್ಲಾ ರಸ್ತೆಗಳನ್ನು ಸ್ವಚ್ಛಗೊಳಿಸುವುದರಿಂದ ನಗರದ ಸ್ಚಚ್ಛತೆ ಕಾಪಾಡಲು ಸಾಧ್ಯವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ತಪ್ಪಿದೆ ಎಂದು ಸ್ಥಳೀಯರು ಅಭಿಪ್ರಾಯಪಡುತ್ತಾರೆ.
ಮುಂಜಾನೆ 5 ಗಂಟೆಯಿಂದಲೇ ನಗರದ ಎಲ್ಲಾ ರಸ್ತೆಗಳನ್ನು ಗುಡಿಸಿ ಸ್ವಚ್ಛಗೊಳಿಸಲಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ನಗರ ಪಾಲಿಕೆ ಅಧಿಕಾರಿಗಳು ಸೂಕ್ತ ಪರಿಕರಗಳು, ಉಡುಪು, ನೀಡಿದ್ದು, ಆಹಾರವನ್ನು ನೀಡುತ್ತಿದ್ದಾರೆ ಎಂದು ಪೌರಕಾರ್ಮಿಕ ಶ್ರೀನಿವಾಸ ಮೂರ್ತಿ ಹೇಳುತ್ತಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಹಣಕಾಸಿನ ನೆರವನ್ನು ಸದ್ಬಳಕೆ ಮಾಡಿಕೊಂಡು ಯಶಸ್ವಿಯಾಗಿ ತ್ಯಾಜ್ಯ ವಿಲೇವಾರಿ ಮಾಡುವುದರ ಜೊತೆಗೆ ಪೌರಕಾರ್ಮಿಕರ ಆರೋಗ್ಯಕ್ಕೂ ಒತ್ತು ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷರಾದ ಯಮುನಾ ಹೇಳುತ್ತಾರೆ.
ತಿಪಟೂರು ನಗರದ 31 ವಾರ್ಡ್ ಗಳಲ್ಲಿ ಸ್ವಚ್ಛತೆಗಾಗಿ 100 ಪೌರಕಾರ್ಮಿಕರು ಶ್ರಮಿಸುತ್ತಿದ್ದು, ನಿತ್ಯ 25 ಟನ್ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ ಎಂದು ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡಿ ವಿವರಿಸುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…