ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ | ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಮೂವರು ವಿದ್ಯಾರ್ಥಿಗಳು ತೇರ್ಗಡೆ

October 6, 2022
8:07 PM

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆಸಿದ 2021-22 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಯ ಮೂವರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಸ್ಕೌಟ್ಸ್ ವಿಭಾಗದಲ್ಲಿ ಪುತ್ತೂರಿನ ಕಲ್ಪವೃಕ್ಷ ಆರ್ಗನಿಕ್ಸ್ ಮಾಲಕ ಸೂರಪ್ಪ ಗೌಡ ಹಾಗೂ ಹರಿಣಾಕ್ಷಿಯವರ ಪುತ್ರ ಸ್ವಸ್ತಿಕ್ ಎ ಎಸ್, ಕಲ್ಲರ್ಪೆಯ ಪಾಪ್ಯುಲರ್ ಸ್ವೀಟ್ಸ್ ನ ಉದ್ಯೋಗಿಯಾಗಿರುವ ಸತೀಶ್ ಬಿ ಹಾಗೂ ಜಯಶ್ರೀಯವರ ಪುತ್ರ ಮನ್ವಿತ್ ಎಸ್ ಹಾಗೂ ಗೈಡ್ಸ್ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ಸಹಶಿಕ್ಷಕ ಉದಯ ಕುಮಾರ್ ರೈ ಎಸ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ ಉಪನ್ಯಾಸಕಿ ದಿವ್ಯಾ ಆಳ್ವ ಎಸ್ ಆರ್ ಅವರ ಪುತ್ರಿ ಪ್ರಾರ್ಥನಾ ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ.

ಮನ್ವಿತ್

ಈ ವಿದ್ಯಾರ್ಥಿಗಳಿಗೆ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಪ್ರಾರ್ಥನಾ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror