Advertisement
MIRROR FOCUS

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

Share

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡಿದರು.

Advertisement
Advertisement

ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಕಡಲಾಮೆಗಳ ಸಂತಾನೋತ್ಪತ್ತಿ ಅವಧಿಯಾಗಿದ್ದು, ಈ ಭಾಗದ ಕಡಲತೀರಗಳಲ್ಲಿ ಆಮೆಗಳು ಮೊಟ್ಟೆ ಇಟ್ಟು ಮರಳಿನಲ್ಲಿ ಮುಚ್ಚಿ ತೆರಳುತ್ತವೆ.  ಅರಣ್ಯ ಇಲಾಖೆ ಸಿಬ್ಬಂದಿ ಮೊಟ್ಟೆ ಇಟ್ಟ ಸ್ಥಳವನ್ನು ಗುರುತಿಸಿ ಅವುಗಳಿಗೆ ರಕ್ಷಣಾ ಜಾಲ ಅಳವಡಿಕೆ ಮಾಡಿ ಸ್ಥಳೀಯರಿಗೆ ಜಾಗೃತಿ, ಮರಿ ಹೊರಬರುವವರೆಗೆ ನಿರಂತರ ನಿಗಾ ಇರಿಸಿದೆ. ಮರಿ ಹೊರಬಂದ ತಕ್ಷಣ ಅವುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಲಾಗುತ್ತದೆ.

ಕಡಲಾಮೆಗಳು ಸಮುದ್ರ ಪರಿಸರದ ಆರೋಗ್ಯದ ಸೂಚಕ ಜೀವಿಗಳು. ಅವುಗಳ ಸಂರಕ್ಷಣೆಯಿಂದ  ಸಮುದ್ರ ಜೀವ ವೈವಿಧ್ಯತೆ,  ಕಡಲತೀರ ಪರಿಸರ ಸಮತೋಲನಗಳಿಗೆ ಕಾರಣವಾಗುತ್ತದೆ. ಕರ್ನಾಟಕ ಕರಾವಳಿಯಲ್ಲಿ ಮಾನವ ಚಟುವಟಿಕೆ, ಬೆಳಕು ಮಾಲಿನ್ಯ ಮತ್ತು ಪ್ರವಾಸೋದ್ಯಮದ ಒತ್ತಡದ ನಡುವೆಯೂ ಅರಣ್ಯ ಇಲಾಖೆಯ ನಿರಂತರ ಸಂರಕ್ಷಣಾ ಕ್ರಮಗಳು ಕಡಲಾಮೆಗಳ ಬದುಕು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಸ್ಥಳೀಯ ಸಮುದಾಯಗಳ ಸಹಕಾರವೂ ಈ ಕಾರ್ಯದಲ್ಲಿ ಪ್ರಮುಖವಾಗಿದೆ.

In Baval near Karwar in Uttara Kannada district, 66 sea turtle hatchlings were safely released into the sea by the Forest Department. The turtle nesting season typically runs from December to May, during which turtles lay eggs along the coast. The department identifies and protects nesting sites until the hatchlings emerge, ensuring their safe journey to the sea. The initiative plays a vital role in conserving marine biodiversity and maintaining coastal ecological balance.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

2 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

23 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago