ಸುಬ್ರಹ್ಮಣ್ಯ | ಕುಮಾರಧಾರಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣ | ಪತ್ತೆಯಾಗದ ಯುವಕ | ಎರಡನೇ ದಿನದ ಕಾರ್ಯಾಚರಣೆ ಸ್ಥಗಿತ |

August 22, 2022
11:06 PM

ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.

ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror