ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ದಿನವೂ ಶೋಧ ಕಾರ್ಯ ಸಂಜೆಯವರೆಗೆ ನಡೆದಿದೆ. ಸಂಜೆಯ ಬಳಿಕ ಕಾರ್ಯಾಚರಣೆ ಸ್ಥಗಿತವಾಗಿದೆ.
ಪ್ರವಾಸಿಗರಾಗಿ ಬಂದಿದ್ದ ಬೆಂಗಳೂರಿನ ದೀಪಾಂಜಲಿ ನಗರದ ಶಿವು ಎಂಬ ಯುವಕ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆ ಇಳಿದ ಬಳಿಕ ನಾಪತ್ತೆಯಾಗಿದ್ದ. ಎರಡು ದಿನವಾದರೂ ಯುವಕ ಪತ್ತೆಯಾಗಿಲ್ಲ. ನೀರಿನಲ್ಲಿ ಮುಳುಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಇಡೀ ದಿನ ಮುಳುಗು ತಜ್ಞರ ಸಹಾಯದಿಂದ ಹುಡುಕಾಟ ನಡೆಸಲಾಗಿದೆ. ಆದರೆ ಸಂಜೆಯ ವೇಳೆ ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಸುಮಾರು 15 ಜನ ನುರಿತ ಈಜುಗಾರರು, ಅಗ್ನಿಶಮಾಕ ದಳ,ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ,ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ಸತತವಾಗಿ 12 ಗಂಟೆಗಳ ಕಾರ್ಯಾಚರಣೆ ನಡೆಸಿದರು. ಸಂಜೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ಮಂಗಳವಾರ ಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…