ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ ಮೇ 8 ರವರೆಗೆ ನಡೆಸಲಾಗುವುದು ಎಂದು ಪಿಯು ಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳು ಹಾಗೂ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳು 2 ನೇ ಪರೀಕ್ಷೆ ಬರೆದು ಉತ್ತೀರ್ಣರಾಗಬಹುದು. ಇದೇ 24 ರಂದು ಕನ್ನಡ, 25 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, 26 ರಂದು ಇತಿಹಾಸ, ಭೌತಶಾಸ್ತ್ರ, 28 ರಂದು ಭೂಗೋಳ ಶಾಸ್ತ್ರ, ರಾಸಾಯನ ಶಾಸ್ತ್ರ, ಮೂಲ ಗಣಿತ, 29 ರಂದು ಇಂಗ್ಲೀಷ್, ಮೇ 2 ರಂದು ಗಣಿತ ಶಾಸ್ತ್ರ, 3 ರಂದು ಕಂಪ್ಯೂಟರ್ ವಿಜ್ಞಾನ ಪರೀಕ್ಷೆ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel