ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.
ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.
ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel