ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

March 4, 2023
9:45 AM

ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ ಊರಿಂದ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಇರೋದಿಲ್ಲ. ಅಂತಹ ದ್ವಿತೀಯ ಪಿಯುಸಿ  ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶುಭ ಸುದ್ದಿ ನೀಡಿದೆ.

Advertisement

ಪರೀಕ್ಷೆ ಬರೆಯಲು  ತೆರಳುವ ವಿದ್ಯಾರ್ಥಿಗಳು ಉಚಿತವಾಗಿ KSRTC ಬಸ್​​ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್​​ನಲ್ಲಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್​ಆರ್​ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್​ಆರ್​ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.

ಈ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು

ಕೆಎಸ್​ಆರ್​ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ
April 14, 2025
7:28 AM
by: ದ ರೂರಲ್ ಮಿರರ್.ಕಾಂ
ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ
April 14, 2025
6:20 AM
by: The Rural Mirror ಸುದ್ದಿಜಾಲ
ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ
April 14, 2025
6:16 AM
by: The Rural Mirror ಸುದ್ದಿಜಾಲ
ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ
April 14, 2025
6:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group