ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ ಊರಿಂದ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಇರೋದಿಲ್ಲ. ಅಂತಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶುಭ ಸುದ್ದಿ ನೀಡಿದೆ.
ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ KSRTC ಬಸ್ನಲ್ಲಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ಪರೀಕ್ಷೆ ಬರೆಯುವುದಕ್ಕಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ತೆರಳುವವರಿಗೂ ಇದು ಅನ್ವಯವಾಗಲಿದೆ. ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದಾಗಿದೆ. ಅಲ್ಲದೆ, ಬಸ್ ಚಾಲಕರಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ನಿಲುಗಡೆ ನೀಡುವಂತೆ ಸೂಚಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯನ ಮಂಡಳಿಯ ಅಧ್ಯಕ್ಷರು ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣದ ವ್ಯವಸ್ಥೆ ಮಾಡುವಂತೆ ಕೆಎಸ್ಆರ್ಟಿಸಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ಮತ್ತು ಅಲ್ಲಿಂದ ವಾಪಸಾಗಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದೆ.
ಈ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು
ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೋರಿಕೆ ಮೇರೆಗೆ ನಿಲುಗಡೆ ನೀಡಬೇಕು ಎಂದು ಚಾಲಕ ಮತ್ತು ನಿರ್ವಾಹಕರಿಗೂ ಸೂಚನೆ ನೀಡಿದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…