ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ

October 9, 2025
6:48 AM

ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ದಿನದಂದು ಹುರಿಯಕ್ಕಿ ಹೋಳಿಗೆ, ಕರಿ ಕಡುಬು, ಎಣ್ಣೆ ಹೋಳಿಗೆ, ಸುರಳಿ ಹೋಳಿಗೆ, ಶೇಂಗಾ ಹೋಳಿಗೆ ಹಾಗೂ ಜೋಳ ಮತ್ತು ಸಜ್ಜೆಯ ರೊಟ್ಟಿ ಜೊತೆ ಪುಂಡಿ, ಬದನೆಕಾಯಿ, ಮೆಣಸಿನಕಾಯಿ ಪಲ್ಲೆ ಸೇರಿದಂತೆ ವಿವಿಧ ಬಗೆಯ ಚಟ್ನಿಯನ್ನು ಮಿಶ್ರಣ ಮಾಡಿ ಜಮೀನಿನಲ್ಲಿ ಹಂಚಿ ತಿನ್ನುತ್ತಾರೆ. ತಾವು ಬೆಳೆದ ಬೆಳೆಗೆ ಪೂಜೆ ಸಲ್ಲಿಸಿ ಬಳಿಕ ಕುಟುಂಬಸ್ಥರೆಲ್ಲರೂ ಒಂದೆಡೆ ಸೇರಿ ಊಟ ಮಾಡಿ ಇಡೀ ದಿನ ಹೊಲದಲ್ಲಿ ಕಳೆಯುತ್ತಾರೆ.

ಹೇಗೆ ಗರ್ಭಿಣಿಯರಿಗೆ ಸೀಮಂತ ಮಾಡುತ್ತೇವೆ. ಅದೇ ರೀತಿ ಭೂಮಿ ತಾಯಿಗೆ  ಮಡಿಲು ತುಂಬುವ ಹಬ್ಬ ಎಂದೇ ಸೀಗೆ ಹುಣ್ಣಿಮಯನ್ನು ಬಣ್ಣಿಸಬಹುದು. ಈ ವೇಳೆ ಭೂಮಿ ತಾಯಿಗೆ ವಿವಿಧ ಖಾದ್ಯಗಳನ್ನು ಅರ್ಪಿಸಿ ಉತ್ತಮ ಫಸಲಿಗೆ ಪ್ರಾರ್ಥಿಸಲಾಗುತ್ತದೆ, ಸೀಗೆ ಹುಣ್ಣಿಮೆ ರೈತರ ಪಾಲಿಗೆ ಸಂಭ್ರಮದ ಹಬ್ಬ ಎನ್ನುತ್ತಾರೆ ರೈತ ಮಹಿಳೆ ಪ್ರಜ್ಞಾ ಜಡಗಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror