ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ದಿನದಂದು ಹುರಿಯಕ್ಕಿ ಹೋಳಿಗೆ, ಕರಿ ಕಡುಬು, ಎಣ್ಣೆ ಹೋಳಿಗೆ, ಸುರಳಿ ಹೋಳಿಗೆ, ಶೇಂಗಾ ಹೋಳಿಗೆ ಹಾಗೂ ಜೋಳ ಮತ್ತು ಸಜ್ಜೆಯ ರೊಟ್ಟಿ ಜೊತೆ ಪುಂಡಿ, ಬದನೆಕಾಯಿ, ಮೆಣಸಿನಕಾಯಿ ಪಲ್ಲೆ ಸೇರಿದಂತೆ ವಿವಿಧ ಬಗೆಯ ಚಟ್ನಿಯನ್ನು ಮಿಶ್ರಣ ಮಾಡಿ ಜಮೀನಿನಲ್ಲಿ ಹಂಚಿ ತಿನ್ನುತ್ತಾರೆ. ತಾವು ಬೆಳೆದ ಬೆಳೆಗೆ ಪೂಜೆ ಸಲ್ಲಿಸಿ ಬಳಿಕ ಕುಟುಂಬಸ್ಥರೆಲ್ಲರೂ ಒಂದೆಡೆ ಸೇರಿ ಊಟ ಮಾಡಿ ಇಡೀ ದಿನ ಹೊಲದಲ್ಲಿ ಕಳೆಯುತ್ತಾರೆ.
ಹೇಗೆ ಗರ್ಭಿಣಿಯರಿಗೆ ಸೀಮಂತ ಮಾಡುತ್ತೇವೆ. ಅದೇ ರೀತಿ ಭೂಮಿ ತಾಯಿಗೆ ಮಡಿಲು ತುಂಬುವ ಹಬ್ಬ ಎಂದೇ ಸೀಗೆ ಹುಣ್ಣಿಮಯನ್ನು ಬಣ್ಣಿಸಬಹುದು. ಈ ವೇಳೆ ಭೂಮಿ ತಾಯಿಗೆ ವಿವಿಧ ಖಾದ್ಯಗಳನ್ನು ಅರ್ಪಿಸಿ ಉತ್ತಮ ಫಸಲಿಗೆ ಪ್ರಾರ್ಥಿಸಲಾಗುತ್ತದೆ, ಸೀಗೆ ಹುಣ್ಣಿಮೆ ರೈತರ ಪಾಲಿಗೆ ಸಂಭ್ರಮದ ಹಬ್ಬ ಎನ್ನುತ್ತಾರೆ ರೈತ ಮಹಿಳೆ ಪ್ರಜ್ಞಾ ಜಡಗಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…