Advertisement
Opinion

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

Share

ಹೌದು, ಚಂದ್ರಭಾಗಾ ನದೀ (ಭೀಮಾ ನದಿ) ತಟ ಸ್ಥಾಪಿತ ವಿಠೋಬನ ಚರಣಗಳಲ್ಲಿ ಸಂಪನ್ನಗೊಂಡ ನಮ್ಮ “ವಾರ್ಕರಿ” (ಭಕ್ತಿಯಾತ್ರೆ) ಹದಿನಾರನೇ ತಾರೀಕಿನ ಬೆಳಗಿನ ಏಳೂವರೆಗೆ ಉಜೈನಿಯ ಮಹಾಕಾಳೇಶ್ವರನ ನೆಲೆಯತ್ತ ಹೊರಟೇ ಬಿಟ್ಟಿತು….

ರಸ್ತೆಯ ಇಕ್ಕೆಲಗಳಲ್ಲೂ ಕಚ್ಚೆಯುಟ್ಟು ಬಿಳಿಟೋಪಿ ಧಾರಿಗಳಾದಂತಹ ಕೃಷ್ಣ ಜನಮಾನಸ, ಘಲ್ ಘಲ್ ಘಲ್ಲೆಂಬ ಗೆಜ್ಜೆ ನಾದ ಹೊಮ್ಮಿಸುತ್ತಾ ಸಾಗುತಿದ್ದ ಗೋಹಿಂಡು ಮತ್ತು ಪಾಲಕ ವೃಂದ, ಅನತಿಯಲ್ಲಿ ಸರಕಾರೀ ಪ್ರಾಯೋಜಿತ ಅಣೆಕಟ್ಟೆಗಳಿಂದ ಹಳ್ಳಿ ಹಳ್ಳಿಗಳಿಗೆ ಹರಿದು ಬರುತಿದ್ದ ಕೃಷ್ಣೆ, ಭೀಮೆಯರು… ಜಲಧಿಯ ತಂಪೆರಲ ಉಂಡು ಜನರ ಬೆವರ ಚೈತನ್ಯದ ಮರುಹುಟ್ಟೋ ಎಂಬಂತೆ ಮೊಗೆಮೊಗೆದು ಬೆಳೆದು ಬಂದ ದ್ರಾಕ್ಷಿ, ಕಿತ್ತಳೆ, ಜೋಳ, ಗೋಧಿ, ತರಕಾರಿಗಳು, ಇದನ್ನೆಲ್ಲಾ ನೋಡುತ್ತಾ ಇರಬೇಕಾದರೆ ನಮ್ಮ ಗಮ್ಯಸ್ಥಾನಕ್ಕೆ ಕರೆದೊಯ್ಯುತಿದ್ದ ಸಪಾಟವಾಗಿದ್ದ ಆಕರ್ಷಕ ರಸ್ತೆ ಮೂಲಕ , ಸುಮಾರು 780 ಕಿಮೀ ದೂರದ ನಮ್ಮ ಆ ದಿನದ ಗಮ್ಯ ಸ್ಥಾನ ಉಜೈನಿಯತ್ತ ನಮ್ಮ ವಾಹನ ಪುಟಿದೋಡುತಿತ್ತು…..

ಭೂಮ್ ಎನ್ನುವ ಪ್ರದೇಶದಲ್ಲಿ ದಕ್ಷಿಣ ಭಾರತೀಯ ಉಪಾಹಾರ ಲಭ್ಯವೆಂಬ ಬೋರ್ಡ್ ಕಂಡು ಬೆಳಗಿನ ಉಪಾಹಾರಕ್ಕಾಗಿ ಅಲ್ಲಿ ನಿಲ್ಲಿಸಿ, ದೋಸೆ ಎನ್ನಬಹುದಾದಂತಹ ದೋಸೆಯನ್ನು ತಿಂದು ಚಾ ಕುಡಿದು ಹೊರಬರಬೇಕಾದರೆ ರಸ್ತೆಯ ಇಕ್ಕೆಲಗಳಲ್ಲೂ ಇದ್ದ ಹೋಟೆಲ್/ಡಾಬಾಗಳಲ್ಲೂ ದೊಡ್ಡ ದೊಡ್ಡ ಪ್ಲಾಸ್ಟಿಕ್ ಮುಚ್ಚಿದ್ದ ಬಿಳಿಯದಾದ ಮುದ್ದೆಗಳು ಕಂಡು ಬಂದು,ಏನೆಂದು ವಿಚಾರಿಸಿದಾಗ, ಸಿಹಿತಿಂಡಿ ಹಾಲಿನ ಉತ್ಪನ್ನ “ಮಾವೇ ಕಿ ಬರ್ಫೀ” ಎಂದು ತಿಳಿಯಿತು…. ನಮ್ಮನ್ನು ಕಂಡಕೂಡಲೇ ಅದರ ಮುಚ್ಚಿಕೆಯನ್ನು ಸರಿಸಿ ಪದರ ಪದರವಾಗಿ ಕತ್ತರಿಸಿ ನಮಗೆ ಕೊಡಲು ಮುಂದಾದರು…. ಆದರೆ ಆ ಉತ್ಪನ್ನ ನಮ್ಮ ಪ್ರಯಾಣದ ಆರೋಗ್ಯಕ್ಕೆ ಹಾನಿಯಾಗಬಹುದೆಂದು ಮುಂದೊತ್ತಿ ನಮ್ಮ ಕಾರ್ ಏರಿ ಹೊರಟೆವು…. ನಯವಾದ ರಸ್ತೆಯಲ್ಲಿ ಕಾರು ಓಡೀಯೇ ಒಡುತಿತ್ತು, ಕಾರಿನೊಳಗೆ ಹಳೇ ಹಿಂದಿ ಸಿನಿಮಾ ಹಾಡಿನ ಲಹರಿ ತೇಲುತಿತ್ತು….  ರಸ್ತೆಗಳಲ್ಲಿ ಸುತ್ತಲೂ ಛತ್ರಪತಿ ಶಿವಾಜಿ ಮಹಾರಾಜರ ಉತ್ಸವದ ನಿಮಿತ್ತ ಎಲ್ಲೆಂದರಲ್ಲಿ ಕೇಸರಿ ಭಗವಾ ರಾರಾಜಿಸುತಿತ್ತು….. ಭೀಡ್… ಚಾಲೀಸ್ ಗಾಂವ್ ಪ್ರದೇಶಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲೂ ಸ್ಥಾಪಿತವಾದ ಬೃಹತ್ ಗಾಳಿ ಯಂತ್ರಗಳು ಗಿರಗಿರನೆ ತಿರುಗಿ ವಿದ್ಯುತ್ ಉತ್ಪಾದನೆ ಮಾಡುತಿದ್ದವು… ಹಾಗೇ…. ಧುಲೇ ಮೂಲಕ ಸಾಗಿ ಸೇಂಧ್ವಾ ಎನ್ನುವಲ್ಲಿ ಮಧ್ಯಪ್ರದೇಶ ಪ್ರವೇಶಿಸಿದೆವು. ಧುಲೇ ಎನ್ನುವಲ್ಲಿ ಕಲ್ಲುಬಂಡೆಗಳಿಂದಲೇ ತುಂಬಿದ ದೊಡ್ಡ ದೊಡ್ಡ ಪರ್ವತಗಳನ್ನು ದಾಟಿ ಕೆಳಕ್ಕಿಳಿಯುತ್ತಾ ಇದ್ದಾಗ ಬೃಹತ್ ಸೋಲಾರ್ ಪಾರ್ಕ್ ಕಂಡುಬಂತು, ಕಡಿದಾದ ಒಣ ಪ್ರದೇಶವದು….

ಆದರೂ ದೂರದ ಸರೋವರ,ಕಾಲುವೆಗಳ ಆಶ್ರಯದಲ್ಲಿ ಜನಮಾನಸದ ಜೀವನ ಚಕ್ರ ನಿರಂತರವಾಗಿತ್ತು. ಸಂಜೆಯ ವೇಳೆಗೆ ಮಧ್ಯಪ್ರದೇಶದ ನರ್ಮದಾ ನದಿಯನ್ನು ದಾಟಿ ಸಾಗಿ ಇಂದೋರ್ ತಲುಪುವಾಗ ಸೂರ್ಯದೇವ ದಿನದ ಕಾಯಕ ಮುಗಿಸಿ ಮಹೋಧದಿಯಲ್ಲಿ ಸ್ನಾನ ಮಾಡಿ ವಿರಮಿಸುವ ತವಕದಲ್ಲಿದ್ದ…. ಅಂತೆಯೇ ದೆವಾಸ್ ಮೂಲಕ ಸಾಗುತಿದ್ದ ನಮಗೆ “ನ್ಯೂಯಾರ್ಕ್” ಒಂದು ಕಿಮೀ ಎಂಬ ರಸ್ತೆ ಸೂಚಕ ಕಂಡು ತಮಾಷೆಗೆ ಒಂದು ಕಾರಣವಾಯಿತು…ಅಂತೂ ರಾತ್ರೆಯ ಒಂಬತ್ತು ಗಂಟೆಗೆ ಉಜೈನಿ ತಲುಪಿದ ನಾವು ರಾತ್ರಿಯ ಊಟ ಮುಗಿಸಿ ,ರೂಮ್ ಪಡೆದು, ಸ್ನಾನಾದಿ ಪೂರೈಸಿ , ಮರುದಿನ ಮಹಾಕಾಲೇಶ್ವರನ ದರ್ಶನ ಮಾಡಿ ಮುಂದೆ ಸಾಗುವ ಬಗ್ಗೆ ಹೋಟೆಲ್ ಯಜಮಾನರಲ್ಲಿ ವಿಚಾರಿಸಿಕೊಂಡು , ಗೂಗಲ್ ಮಾಮನಲ್ಲೂ ನೋಡುತ್ತಾ ಇದ್ದಂತೆಯೇ ನಿದ್ರೆ ಆವರಿಸಿತ್ತು .

(ಮುಂದುವರಿಯುವುದು…. ಜ್ಯೋತಿರ್ಲಿಂಗ ಮಹಾಕಾಲೇಶ್ವರ,ಹಾಗೂ ಶಕ್ತಿ ಪೀಠ ದರ್ಶನ)

ಬರಹ :
ಸುರೇಶ್ಚಂದ್ರ ತೊಟ್ಟೆತ್ತೋಡಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

2 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

10 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

11 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

11 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

21 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

22 hours ago