IAS ಸಿಂಧೂರಿ-IPS ರೂಪಾ ಕಚ್ಚಾಟ ಪ್ರಕರಣದಲ್ಲಿ ಸರ್ಕಾರ ಜಡೆ ಜಗಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಸಿಂಧೂರಿ, ಡಿ.ರೂಪಾ ಹಾಗೂ ರೂಪ ಪತಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಮಾಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ. ರೂಪ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಷಯ ಪ್ರಸ್ತಾಪಿಸಿ, ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದರು. ರಾಜ್ಯ ಸರ್ಕಾರ ಖಡಕ್ ಕ್ರಮಕ್ಕೆ ಮುಂದಾಗಿದೆ. ಸಿಂಧೂರಿ, ಡಿ.ರೂಪಾ ಕಡ್ಡಾಯ ರಜೆ ಮೇಲೆ ಕಳಿಸೋ ಸಾಧ್ಯತೆಯಿದೆ. ಸಿಎಂ ಬೊಮ್ಮಾಯಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ ಬೆನ್ನಲ್ಲೇ ಸ್ಥಳ ತೋರಿಸದೇ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಕಾಲ ಕಡ್ಡಾಯ ರಜೆ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ.
ಸಿಎಂ ಬೊಮ್ಮಾಯಿ CS ವಂದಿತಾ ಶರ್ಮಾ ಎದುರೇ ಗರಂ ಆಗಿದ್ದಾರೆ. ಅಧಿಕಾರಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗ್ತಿದೆ, ಸರ್ಕಾರದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಿ ಎಂದು CSಗೆ ಸಿಎಂ ಖಡಕ್ ಸೂಚನೆ ನೀಡಿದ್ದರು. ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಲು ಸಲಹೆ ನೀಡಿದ್ದರು.