ಮಹಿಳಾ ಅಧಿಕಾರಿಗಳ ಜಟಾಪಟಿ | ರಾಜ್ಯ ಸರ್ಕಾರದಿಂದ ಮೂವರ ಎತ್ತಂಗಡಿ |

February 21, 2023
2:51 PM

IAS ಸಿಂಧೂರಿ-IPS ರೂಪಾ ಕಚ್ಚಾಟ ಪ್ರಕರಣದಲ್ಲಿ ಸರ್ಕಾರ ಜಡೆ ಜಗಳಕ್ಕೆ ಬ್ರೇಕ್​​ ಹಾಕಲು ಮುಂದಾಗಿದೆ. ಸಿಂಧೂರಿ, ಡಿ.ರೂಪಾ  ಹಾಗೂ ರೂಪ ಪತಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಮಾಡಿದೆ.

Advertisement
Advertisement

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ. ರೂಪ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ವಿಷಯ ಪ್ರಸ್ತಾಪಿಸಿ, ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದರು.  ರಾಜ್ಯ ಸರ್ಕಾರ ಖಡಕ್​​ ಕ್ರಮಕ್ಕೆ ಮುಂದಾಗಿದೆ. ಸಿಂಧೂರಿ, ಡಿ.ರೂಪಾ ಕಡ್ಡಾಯ ರಜೆ ಮೇಲೆ ಕಳಿಸೋ ಸಾಧ್ಯತೆಯಿದೆ.  ಸಿಎಂ ಬೊಮ್ಮಾಯಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ ಬೆನ್ನಲ್ಲೇ ಸ್ಥಳ ತೋರಿಸದೇ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಕಾಲ ಕಡ್ಡಾಯ ರಜೆ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ.

ಸಿಎಂ ಬೊಮ್ಮಾಯಿ CS ವಂದಿತಾ ಶರ್ಮಾ ಎದುರೇ ಗರಂ ಆಗಿದ್ದಾರೆ. ಅಧಿಕಾರಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಡ್ಯಾಮೇಜ್​ ಆಗ್ತಿದೆ, ಸರ್ಕಾರದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಿ ಎಂದು CSಗೆ ಸಿಎಂ ಖಡಕ್​ ಸೂಚನೆ ನೀಡಿದ್ದರು.  ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಲು ಸಲಹೆ ನೀಡಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror