ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

June 14, 2025
9:44 PM

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು.  ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್‌ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror