ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್‌ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…