ಗೋಕರ್ಣದ ಅಶೋಕೆಯಲ್ಲಿ ಸೇವಾಸೌಧದ ಸಮರ್ಪಣೆ | ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಕರ್ತವ್ಯಪರತೆಯಿಂದ ಕಾರ್ಯ ನಿರ್ವಹಿಸುವ ಪೀಳಿಗೆಯಾಗಿ ರೂಪುಗೊಳ್ಳಲಿ | ಬಿ.ಎಲ್.ಸಂತೋಷ್

January 28, 2023
10:10 PM
ಇಡೀ ದೇಶಕ್ಕೇ ಚೈತನ್ಯ ಮೂಡಿಸುವ ಕೇಂದ್ರವಾಗಿ ವಿಷ್ಣುಗುಪ್ತ ವಿಶ್ವ ವಿದ್ಯಾನಿಲಯವು ಮುಂದಿನ ದಿನಗಳಲ್ಲಿ ಬೆಳಕಾಗಲಿ.. ಇಲ್ಲಿನ ಮಕ್ಕಳು ಕುಟುಂಬ, ಸಮಾಜ, ಭಾರತ, ವಿಶ್ವದಲ್ಲಿ ತಾವು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿದುಕೊಂಡು ಕರ್ತವ್ಯಪರತೆಯಿಂದ ಕಾರ್ಯ ನಿರ್ವಹಿಸುವ ಪೀಳಿಗೆಯಾಗಿ ರೂಪುಗೊಳ್ಳಲಿ. ಕರ್ತವ್ಯವೇ ಜೀವನ ಎಂಬ ತತ್ವ ಬೋಧಿಸುವ ಇಂಥ ಕಾರ್ಯಕ್ಕೆ ಸಮಾಜ ಕೈಜೋಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ಅವರು ಗೋಕರ್ಣದ ಅಶೋಕೆಯಲ್ಲಿ ಶ್ರೀಮಠದ ಕಾರ್ಯಕರ್ತರ ದೇಣಿಗೆಯಿಂದಲೇ ವಿಶಿಷ್ಟವಾಗಿ ನಿರ್ಮಿಸಲಾದ ಸೇವಾಸೌಧದ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದರು.ಇಡೀ ವಿಶ್ವದ ದೃಷ್ಟಿ ಇಂದು ಭಾರತದ ಮೇಲೆ ನೆಟ್ಟಿದೆ. 12 ಸಾವಿರ ಮಂದಿ ಭಾರತದಲ್ಲಿ ಯೋಗ ಕಲಿತು ವಿಶ್ವಾದ್ಯಂತ ಶಿಕ್ಷಣ ನೀಡುತ್ತಿದ್ದಾರೆ. 40 ಸಾವಿರ ಮಂದಿ ಎಣ್ಣೆ ಮಸಾಜ್ ಚಿಕಿತ್ಸೆ ನೀಡುತ್ತಿದ್ದಾರೆ. ಲಕ್ಷಕ್ಕಿಂತ ಹೆಚ್ಚು ಮಂದಿ ಸಂಸ್ಕೃತ ವಿದ್ವಾಂಸರು ವಿಶ್ವಾದ್ಯಂತ ಸಂಸ್ಕೃತದ ಕಂಪು ಪಸರಿಸುತ್ತಿದ್ದಾರೆ. ವಿಶ್ವದ 27 ವಿವಿಗಳಲ್ಲಿ ಸಂಸ್ಕೃತ ಪೀಠಗಳಿವೆ. ಭಾರತದಲ್ಲಿ ಇಂಥ ವಿಶಿಷ್ಟ ಪ್ರಯೋಗಗಳು ನಡೆಯುತ್ತಿರುವುದರಿಂದ ಜಗತ್ತಿನಲ್ಲಿ ಭಾರತಕ್ಕೆ ಗೌರವ ದೊರಕುತ್ತಿದೆ. ಇದೆಲ್ಲ ಸಾಧ್ಯವಾಗಿರುವುದು ಈ ಬಗೆಯ ಚೈತನ್ಯ ಕೇಂದ್ರಗಳ ಮೂಲಕ ಎಂದು ವಿಶ್ಲೇಷಿಸಿದರು.ನಾವು ಸಮಾಜಕ್ಕೆ, ಜಗತ್ತಿಗೆ ನೀಡಬೇಕಾದ್ದು ಬಹಳಷ್ಟಿದೆ ಎಂಬ ಜ್ಞಾನೋದಯ ಪ್ರತಿಯೊಬ್ಬರಲ್ಲೂ ಆಗುತ್ತಿದೆ. ರಾಜ್ಯದಲ್ಲಿ ಸಮಾಜಕ್ಕೆ ಜ್ಞಾನ ಹಂಚುವ ಕಾರ್ಯವನ್ನು ಮಠ ಮಂದಿರಗಳು ಮಾಡುತ್ತಿದ್ದು, 80 ಸಾವಿರಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಮಠಗಳು ನಡೆಸುತ್ತಿವೆ. ಜಗತ್ತಿನ ಒಳಿತಿಗಾಗಿ ನಾವು ಸುಶಿಕ್ಷಿತರಾಗಬೇಕು ಎಂಬ ಭಾವನೆಯಲ್ಲಿ ಯುವ ಸಮುದಾಯದಲ್ಲಿ ಬೆಳೆಸುವ ಮೂಲಕ ಅವರನ್ನು ದೇಶದ ಆಸ್ತಿಯಾಗಿ ರೂಪಿಸಬೇಕು ಎಂದರು.‌
ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ರಾಘವೇಶ್ವರ ಶ್ರೀಗಳು,  ಮರಳಿ ಮೂಲಕ್ಕೆ ಎನ್ನುವುದು ನಮ್ಮ ಸಂಸ್ಕೃತಿಯ ತಿರುಳು. ಜೀವನ ಎನ್ನುವುದು ಸತ್ ವೃತ್ತ ಇದ್ದಂತೆ; ಮತ್ತೆ ಮೂಲ ಬಿಂದುವನ್ನೇ ಮುಟ್ಟುತ್ತದೆ. ಭಗವಂತನ ಸನ್ನಿಧಿಯಿಂದ ಬಂದ ನಾವು ಮತ್ತೆ ಅವನನ್ನೇ ತಲುಪಬೇಕು ಎನ್ನುವ ಆಶಯದೊಂದಿಗೆ ನಮ್ಮ ಕರ್ತವ್ಯಗಳನ್ನು ನಿಭಾಯಿಸೋಣ ಎಂದರು.
ಶಿಷ್ಯರ ಕೊಡುಗೆಯಿಂದಲೇ ನಿರ್ಮಾಣವಾದ ಸೇವಾಸೌಧ ನಮ್ಮೆಲ್ಲರ ಸೇವೆಯ ಜವಾಬ್ದಾರಿ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಸೌಧವಾಗಿ, ರಾಷ್ಟ್ರಸಂಸ್ಕಾರದ ಪ್ರೇರಣಾಕೇಂದ್ರವಾಗಿ ಬೆಳಗಲಿ ಎಂದು ರಾಜ್ಯ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆಶಿಸಿದರು.
ತಿರುವನಂತಪುರ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಪಟ್ಟೇರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕರಾದ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಗೋವಾ ಶಾಸಕ ಕೃಷ್ಣಾ ಡಿ.ಸಾಲ್ಕರ್, ಪಶ್ಚಿಮಘಟ್ಟ ಕಾರ್ಯಪಡೆಯ ಗೋವಿಂದ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಮೋಹನ್ ಭಾಸ್ಕರ್ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ಸಭಾಪೂಜೆ ನೆರವೇರಿಸಿದರು. ಕಾರ್ಯದರ್ಶಿ ನಾಗರಾಜ ಭಟ್ ಪಿದಮಲೆ, ವಿವಿವಿ ಕೇಂದ್ರ ಸಮಿತಿ ಅಧ್ಯಕ್ಷ ಡಿ.ಡಿ.ಶರ್ಮಾ, ಮಾತೃತ್ವಂ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಅಖಿಲ ಹವ್ಯಕ ಮಹಾಸಭಾದ ಉಪಾಧ್ಯಕ್ಷ ವೇಣುವಿಘ್ನೇಶ್, ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಲೋಕಸಂಪರ್ಕಾಧಿಕಾರಿ ಹರಿಕೃಷ್ಣ ಪೆರಿಯಾಪು, ವಿಶ್ರಾಂತ ಸಿಇಓ ಕೆ.ಜಿ.ಭಟ್, ಪ್ರಮೋದ್ ಹೆಗಡೆ, ಡಾ.ವೈ.ವಿ.ಕೃಷ್ಣಮೂರ್ತಿ, ಗ್ರಾಮಪಂಚಾಯತ್ ಅಧ್ಯಕ್ಷ ಮಂಜುನಾಥ ಜನ್ನು, ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ್ ಪಂಡಿತ್ ಮತ್ತಿತರರು ಭಾಗವಹಿಸಿದ್ದರು.
Advertisement
Advertisement

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror