ದುರ್ಗಾ ವಿಗ್ರಹ ವಿಸರ್ಜನೆ | ಪ್ರತ್ಯೇಕ ಘಟನೆಗಳಲ್ಲಿ 13 ಮಂದಿ ಸಾವು | ಹಲವರು ನಾಪತ್ತೆ |

October 6, 2022
10:23 AM

ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್‌ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.

Advertisement
Advertisement

ಪಶ್ಚಿಮ ಬಂಗಾಳದ ಜೈಲ್‌ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror