ದೇಶದಾದ್ಯಂತ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಬಳಿಕ ದುರ್ಗಾ ವಿಗ್ರಹ ವಿಸರ್ಜನೆ ವೇಳೆ ವಿವಿದೆಡೆ ನಡೆದ ದುರ್ಘಟನೆಯಲ್ಲಿ ಒಟ್ಟು 13 ಮಂದಿ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಹಠಾತ್ ಪ್ರವಾಹ ಬಂದು ಜನರು ಕೊಚ್ಚಿ ಹೋಗಿದ್ದಾರೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇನ್ನೆರಡು ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಜೈಲ್‌ಪೈಗುರಿಯಲ್ಲಿ, ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಅಪ್ಪಳಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ 15 ವರ್ಷದ ಬಾಲಕ ಮತ್ತು 19 ಮತ್ತು 22 ವರ್ಷದ ಇಬ್ಬರು ಯುವಕರು ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ದುರ್ಗಾ ದೇವಿ ವಿಗ್ರಹ ವಿಸರ್ಜನೆ ವೇಳೆ ಮಳೆ ನೀರಿನಿಂದ ತುಂಬಿದ್ದ ಹಳ್ಳದಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರ್ಗಾ ಪೂಜೆ ಹಬ್ಬದ ಅಂತಿಮ ದಿನದಂದು ಜನರು ದುರ್ಗಾ ಮೂರ್ತಿಯ ವಿಸರ್ಜನೆಗೆ ನದಿಗೆ ತೆರಳುತ್ತಾರೆ. ಈ ಸಮಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿದೆ. ಕಳೆದ ಬಾರಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹರಿಯಾಣದಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…