ಹವಾಮಾನ ವರದಿ | 14-12-2025 | ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣ ಸೃಷ್ಟಿ

December 14, 2025
1:31 PM

15.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆಯೊಂದಿಗೆ ತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ.

ಉತ್ತರ ಭಾರತದ ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ ಕಡೆ ಅಧಿಕ ಪ್ರಮಾಣದಲ್ಲಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಡಿಸೆಂಬರ್ 15 ರಂದು ಈ ತಿರುಗುವಿಕೆಯ ವ್ಯಾಪ್ತಿ ವಿಸ್ತಾರಗೊಂಡು ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗಲಿದೆ. ಇದರಿಂದ ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.
ಡಿಸೆಂಬರ್ 15 ಮುಂಜಾನೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಡಿಸೆಂಬರ್ 16 ಹಾಗೂ 17ರಂದು ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಡಿಸೆಂಬರ್ 16, 17 ರಂದು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಡಿಸೆಂಬರ್ 18 ಅಥವಾ 19ರಿಂದ ಮತ್ತೆ ತೀವ್ರ ಛಳಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror