15.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆಯೊಂದಿಗೆ ತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ.
ಉತ್ತರ ಭಾರತದ ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ ಕಡೆ ಅಧಿಕ ಪ್ರಮಾಣದಲ್ಲಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ತೀವ್ರ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಡಿಸೆಂಬರ್ 15 ರಂದು ಈ ತಿರುಗುವಿಕೆಯ ವ್ಯಾಪ್ತಿ ವಿಸ್ತಾರಗೊಂಡು ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗಲಿದೆ. ಇದರಿಂದ ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.
ಡಿಸೆಂಬರ್ 15 ಮುಂಜಾನೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಡಿಸೆಂಬರ್ 16 ಹಾಗೂ 17ರಂದು ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಡಿಸೆಂಬರ್ 16, 17 ರಂದು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಡಿಸೆಂಬರ್ 18 ಅಥವಾ 19ರಿಂದ ಮತ್ತೆ ತೀವ್ರ ಛಳಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…