ಅಮೆರಿಕದ ಹಲವು ರಾಜ್ಯಗಳಲ್ಲಿ ಅತ್ಯಂತ ಪ್ರಬಲ ಚಂಡಮಾರುತ ಹಾಗೂ ಸುಳಿಗಾಳಿ ಉಂಟಾಗಿದ್ದು, ಈವರೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, 40 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಶುಕ್ರವಾರ ಆರಂಭವಾದ ಚಂಡಮಾರುತವು ಮಿಸ್ಸೋರಿ , ಆರ್ಕಾನ್ಸಾ ಹಾಗೂ ಕಾನ್ ಸಾಸ್ ರಾಜ್ಯಗಳಲ್ಲಿ ಹೆಚ್ಚಿನ ಅನಾಹುತ ಸೃಷ್ಟಿಸಿದೆ. ಭಾರೀ ವೇಗದಲ್ಲಿ ಬೀಸುತ್ತಿರುವ ಸುಳಿಗಾಳಿಯು ಹಲವು ಪ್ರದೇಶಗಳಲ್ಲಿನ ಮನೆಗಳನ್ನು ಧ್ವಂಸಮಾಡಿದ್ದು, 50ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಮಿನಿಸೋಟಾ ಹಾಗೂ ದಕ್ಷಿಣ ಡಕೋಟಾ ರಾಜ್ಯಗಳಲ್ಲೂ ಭಾರೀ ಪ್ರಮಾಣದ ಅನಾಹುತ ಸಂಭವಿಸಿದೆ. ಧೂಳಿನೊಂದಿಗೆ ಗಂಟೆಗೆ 80 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಿತ್ತು.ಚಂಡಮಾರುತದ ಬಗ್ಗೆ ಸರ್ಕಾರ ಮೊದಲೇ ನಿರೀಕ್ಷಿಸಿ, ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ಹಾಗಾಗಿ ಹಾನಿಯ ಪ್ರಮಾಣ ತಗ್ಗಿದೆ.
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ…
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದೆ. ಕಾಶ್ಮೀರದ ಹಲವು ಭಾಗಗಳಲ್ಲಿ ಎರಡು ದಿನಗಳ…
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…