ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ಅವರೊಂದಿಗೆ ಮಹಿಳೆಯೊಬ್ಬರು ಶಬರಿಮಲೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು ದೇವಸ್ಥಾನದ ವಿರುದ್ಧ ಸುಳ್ಳು ಮಾಹಿತಿಯನ್ನು ಆನ್ ಲೈನ್ ಮೂಲಕ ಪ್ರಚಾರ ನಡೆಸಲಾಗುತ್ತಿದೆ ಎಂದು ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿಯ ತಿರುವಾಂಕೂರು ದೇವಸ್ವಂ ಬೋರ್ಡ್ ಪದಾಧಿಕಾರಿಗಳು ಆರೋಪಿಸಿದ್ದಾರೆ.
ದೇವಾಲಯದ ನಿಯಮಗಳ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಿರಂಜೀವಿ ಮತ್ತು ಅವರ ತಂಡ ಭಾನುವಾರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸೋಮವಾರ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಯುವತಿಯೊಬ್ಬಳು ಪ್ರವೇಶಿಸಿದ್ದರಿಂದ ದೇವಸ್ಥಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಎಂದು ಟಿಡಿಬಿ ಅಧ್ಯಕ್ಷ ಆನಂದಗೋಪನ್ ಹೇಳಿದ್ದಾರೆ.
ನಟನ ಜತೆಗಿದ್ದ ಮಹಿಳೆ ಈ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಆಧಾರ್ ಕಾರ್ಡ್ ಗಮನಿಸಿದಾಗ ಅವರ ಜನ್ಮ ದಿನಾಂಕವನ್ನು 1966 ಎಂದು ನಮೂದಿಸಲಾಗಿದೆ. ಕೆಲವರು ಏಕೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಸುಳ್ಳು ಮಾಹಿತಿ ಹಾಗೂ ಆನ್‌ಲೈನ್ ಅಭಿಯಾನದ ವಿರುದ್ಧ ಪೊಲೀಸರಿಗೆ ದೂರು ನೀಡಲು ನಾವು ನಿರ್ಧರಿಸಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದೇವೆ ಎಂದು ಆನಂದಗೋಪನ್ ಹೇಳಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…