ಇಂದಿನಿಂದ(ಅ.16) 5 ದಿನಗಳ ಕಾಲ ಶಬರಿಮಲೆಯಲ್ಲಿ ಭಕ್ತರಿಗೆ ದರ್ಶನ ಅವಕಾಶ..

October 16, 2020
12:38 PM
ಲಾಕ್​ಡೌನ್ ನಲ್ಲಿ ಮುಚ್ಚಲಾಗಿದ್ದ ದೇವಸ್ಥಾನಗಳು ಒಂದೊಂದಾಗಿ ತೆರೆಯಲಾಗುತ್ತಿದ್ದು, ನಿಯಮಿತ ಸಂಖ್ಯೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದೆ. ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ ಎಂದು ತ್ರವಂಕೋರ್ ದೇವಸ್ವಂ ಬೋರ್ಡ್​ (ಟಿಡಿಬಿ) ತಿಳಿಸಿದೆ. ಈಗಾಗಲೇ ವರ್ಚುವಲ್ ಕ್ಯೂ ಪೋರ್ಟಲ್​ನಲ್ಲಿ ಹೆಸರು ನೋಂದಾಯಿಸಿಕೊಂಡ ಭಕ್ತರಿಗೆ ಮಾತ್ರ ಪಂಬ ಬೇಸ್​ ಕ್ಯಾಂಪ್​ನಿಂದ ಶಬರಿಮಲೆ ಬೆಟ್ಟವನ್ನು ಏರಿ, ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದು ಹಾಗೂ ಒಂದು ದಿನಕ್ಕೆ 250 ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗ‌ಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್‌ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್​ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.

ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ  ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್​ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror