ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ವಿಭಾಗಕ್ಕೆ ಮೀಸಲಾಗಿತ್ತು. ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ವಿಭಾಗದಿಂದ ಸದಸ್ಯರು ನಾಮಪತ್ರ ಸಲ್ಲಿಸದೇ ಇದ್ದ ಕಾರಣ ನಿಯಮದ ಪ್ರಕಾರ ಹಿ.ವ.(ಬಿ) ವಿಭಾಗದ ಸದಸ್ಯರು ನಾಮಪತ್ರ ಸಲ್ಲಿಸಲು ಅವಕಾಶದ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ತೋಟಗಾರಿಕಾ ಇಲಾಖೆಯ ಅಧಿಕಾರಿ ಅರಬಣ್ಣ ಪೂಜಾರ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ಸದಸ್ಯರಾದ ಪಶಾಂತ್ ಮಾವಿನಕಟ್ಟೆ, ದುರ್ಗದಾಸ್ ಮೆತ್ತಡ್ಕ, ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾದ ಸುಲೋಚನ ದೇವ, ಸದಸ್ಯೆ ರಾಜೇಶ್ವರಿ ಉಪಸ್ಥಿತರಿದ್ದರು.