ದೇವಚಳ್ಳ ಗ್ರಾಪಂ ಅಧ್ಯಕ್ಷರಾಗಿ ಶೈಲೇಶ್‌ ಅಂಬೆಕಲ್ಲು ಆಯ್ಕೆ |

October 4, 2023
2:25 PM

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇವಚಳ್ಳ ಗ್ರಾಮ ಪಂಚಾಯತ್‌ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ  ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ವಿಭಾಗಕ್ಕೆ ಮೀಸಲಾಗಿತ್ತು. ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ವಿಭಾಗದಿಂದ ಸದಸ್ಯರು ನಾಮಪತ್ರ ಸಲ್ಲಿಸದೇ ಇದ್ದ ಕಾರಣ ನಿಯಮದ ಪ್ರಕಾರ ಹಿ.ವ.(ಬಿ) ವಿಭಾಗದ ಸದಸ್ಯರು ನಾಮಪತ್ರ ಸಲ್ಲಿಸಲು ಅವಕಾಶದ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ತೋಟಗಾರಿಕಾ ಇಲಾಖೆಯ ಅಧಿಕಾರಿ ಅರಬಣ್ಣ ಪೂಜಾರ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ಸದಸ್ಯರಾದ ಪಶಾಂತ್ ಮಾವಿನಕಟ್ಟೆ, ದುರ್ಗದಾಸ್ ಮೆತ್ತಡ್ಕ, ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾದ ಸುಲೋಚನ ದೇವ, ಸದಸ್ಯೆ ರಾಜೇಶ್ವರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror