Advertisement
MIRROR FOCUS

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

Share

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ(Sharavathi pumped storage Project) ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್(K J George) ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ(Eshwar Khandre) ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.

ಪ್ರಸ್ತುತ ಇರುವ ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಜೊತೆಗೆ ಬರೋದ್ರಿಂದ  ಅರಣ್ಯಕ್ಕೆ ಆಗುವ ಹಾನಿಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್ ಹಾಗೂ ಅವರೊಂದಿಗೆ ಇದ್ದ ಇಂಧನ ಇಲಾಖೆ ಅಧಿಕಾರಿಗಳು ಅರಣ್ಯ ಸಚಿವರಿಗೆ ಮಾಹಿತಿ ನೀಡಿದ್ರು. ಇದನ್ನು ಪರಿಗಣಿಸಿದ ಸಚಿವರು, ಕೇಂದ್ರದಿಂದ ಸೂಕ್ತ ಅನುಮತಿಗಳಿಗಾಗಿ ಒಂದು ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,”ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು, ಹಾಲಿ ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯದಿಂದ ಹರಿಯುವ ನೀರನ್ನು ಮೋಟರ್ ಪಂಪ್ ಗಳ ಮೂಲಕ ಮೇಲಕ್ಕೆ ಹರಿಸಿ ಮತ್ತೆ ವಿದ್ಯುತ್ ಉತ್ಪಾದಿಯುವ ಯೋಜನೆಯಾಗಿದೆ. ಪರಿಸರ ಮತ್ತು ಅರಣ್ಯದ ಮೇಲೆ ಯಾವುದೇ ಗಂಭೀರ ಪರಿಣಾಮ ಉಂಟಾಗದಂತೆ ಸುಮಾರು 2 ಸಾವಿರ ಮೆಗಾವ್ಯಾಟ್ ನಷ್ಟು ಬೃಹತ್ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಹೀಗಾಗಿ ಅದಕ್ಕೆ ಸಂಬಂಧಿಸಿದ ಅಗತ್ಯ ಅನುಮತಿಗಳನ್ನು ನೀಡಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು”, ಎಂದು ಅರಣ್ಯ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಸಂಬಂಧಿಸಿದ ಜಿಲ್ಲಾ ಅರಣ್ಯಾಧಿಕಾರಿಗಳಿಗೂ ಸೂಕ್ತ ಸಲಹೆಗಳನ್ನು ನೀಡಿ ವರದಿ ಕಳುಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಕೆಪಿಸಿಎಲ್ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

3 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

16 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

17 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

17 hours ago