ಸದ್ಗರು ಸಂಗೀತ ಪಾಠ ಶಾಲಾ ವತಿಯಿಂದ ಮಂಗಳೂರಿನ ಶ್ರೀಸುಬ್ರಹ್ಮಣ್ಯ ಸಭಾ ಸದನದಲ್ಲಿ ನಡೆದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಸಹಿತ ಸದ್ಗುರು ಶ್ರೀತ್ಯಾಗರಾಜ-ಪುರಂದರ ಉತ್ಸವದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಸೀತಾರಾಮ ಕಲ್ಯಾಣೋತ್ಸವದ ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀರಾಮಸಂಕೀರ್ತನೆ ನಡೆಯಿತು. ಕಲ್ಯಾಣೋತ್ಸವದ ನಂತರ ಸಂಪ್ರದಾಯದಂತೆ ಶ್ರೀ ತ್ಯಾಗರಾಜರ ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನ ಜರಗಿತು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ವಿದ್ವಾಂಸ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಮತ್ತು ಖ್ಯಾತ ಗಾಯಕ ವಿದ್ವಾನ್ ಶಶಿಧರ ಕೋಟೆಯವರಿಗೆ ಪಲ್ಲವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ವಿನಯ್ ಭಟ್ ಪಿ. ಜೆ., ಹಿರಿಯ ಸಂಗೀತ ವಿದ್ವಾಂಸ ಗಾನಕೇಸರಿ ಕುದುಮಾರ್ ಎಸ್. ವೆಂಕಟ್ರಾಮನ್, ಕೃಷಿಕ ಸುಬ್ರಹ್ಮಣ್ಯ ಭಟ್ ಕಾವಿನಮೂಲೆ ಹಾಗೂ ಸಂಸ್ಥೆಯ ನಿರ್ದೇಶಕ ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಉಪಸ್ಥಿತರಿದ್ದರು.
ವಿದ್ವಾನ್ ಗಣೇಶ್‍ರಾಜ್ ಯಂ. ವಿ. ಸ್ವಾಗತಿಸಿ, ಸತ್ಯನಾರಾಯಣ ಭಟ್ರಕೋಡಿ ಕಾರ್ಯಕ್ರಮ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆಗಳಾದ ಸಿರಿ ಶರ್ಮ, ಪ್ರಣವ್ ಕುಮಾರ್, ಕೃಷ್ಣ ಎಂ. ಎಸ್., ಗೌತಮಿ ಎಸ್. ಹಾಗೂ ದೀಕ್ಷಾ ಉಡುಪ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…