ಪಶುಪಾಲನ ಇಲಾಖೆಯ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಸನ ವತಿಯಿಂದ ರೈತರಿಗೆ ಮತ್ತು ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ತರಬೇತಿ ಏರ್ಪಡಿಸಲಾಗಿದೆ. ಭಾಗವಹಿಸುವವರಿಗೆ ಊಟದ ವ್ಯವಸ್ಥೆ ವಸತಿ ವ್ಯವಸ್ಥೆ ಇರುವುದಿಲ್ಲ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ.
ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನವೆಂಬರ್ 15 ರಿಂದ 16 ರವರೆಗೆ 2 ದಿನಗಳ ಅವಧಿ, ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ನವೆಂಬರ್ 17ರಿಂದ 18ರವರೆಗೆ ಎರಡು ದಿನಗಳ ಅವಧಿ ವರೆಗೆ ನಡೆಯಲಿದೆ. ಆಸಕ್ತರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಗ್ಗೆ 10.30 ಗಂಟೆಗೆ ಉಪ ನಿರ್ದೇಶಕರ ಕಚೇರಿ, ಪಶುಪಾಲರ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಸಂತೆಪೇಟೆ ಹಾಸನದಲ್ಲಿ ಹಾಜರಾಗಬಹುದು ಎಂದು ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…