ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

June 12, 2026
6:58 AM
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು ಕಂಡುಬಂದ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ.

ಕೇರಳಂನ ಕೊಲ್ಲಂ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಶಿಗೆಲ್ಲಾ ಸೋಂಕು (Shigellosis) ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.  ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ. ಸೋಂಕು ದೃಢಪಟ್ಟ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕು ಪತ್ತೆಯಾದ ಬಳಿಕ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಕುಡಿಯುವ ನೀರು, ಆಹಾರ ಸುರಕ್ಷತೆ ಮತ್ತು ಸ್ವಚ್ಛತೆ ಕುರಿತು ನಿಗಾ ವಹಿಸಲಾಗುತ್ತಿದ್ದು, ಸೋಂಕಿನ ಮೂಲವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಶಿಗೆಲ್ಲಾ ಒಂದು ಬ್ಯಾಕ್ಟೀರಿಯಾ ಸೋಂಕಾಗಿದ್ದು, ಮುಖ್ಯವಾಗಿ ಕಲುಷಿತ ನೀರು ಮತ್ತು ಆಹಾರದ ಮೂಲಕ ಹರಡುತ್ತದೆ. ಅತಿಸಾರ, ಹೊಟ್ಟೆನೋವು, ಜ್ವರ, ವಾಂತಿ ಹಾಗೂ ರಕ್ತಮಿಶ್ರಿತ ಮಲವಿಸರ್ಜನೆ ಇದರ ಪ್ರಮುಖ ಲಕ್ಷಣಗಳಾಗಿವೆ. ಮಕ್ಕಳಲ್ಲಿ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇರುವುದರಿಂದ ಶಾಲಾ ಆಡಳಿತ ಮತ್ತು ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗೆ ಕೇರಳದ ವಿವಿಧ ಜಿಲ್ಲೆಗಳಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಗಾ ವಹಿಸಿದೆ. ಸಾರ್ವಜನಿಕರು ಕುದಿಸಿದ ನೀರು ಸೇವಿಸುವುದು, ಕೈಗಳನ್ನು ಸ್ವಚ್ಛವಾಗಿಡುವುದು ಮತ್ತು ಸ್ವಚ್ಛ ಆಹಾರ ಸೇವಿಸುವಂತೆ ಸಲಹೆ ನೀಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಪ್ರಕಾರ, ಕೇರಳದಲ್ಲಿ ಸೋಂಕು ಹರಡುವಿಕೆಗೆ ಪ್ರಮುಖ ಕಾರಣಗಳೆಂದರೆ ಮಳೆಗಾಲದಲ್ಲಿ ನೀರಿನ ಮೂಲಗಳು ಕಲುಷಿತಗೊಳ್ಳುವುದು, ಆಹಾರ ಸುರಕ್ಷತೆಯ ಕೊರತೆ, ಕೈಗಳ ಸ್ವಚ್ಛತೆಯ ಅಭಾವ ಹಾಗೂ ಶಾಲೆಗಳಂತಹ ಜನಸಂದಣಿ ಪ್ರದೇಶಗಳಲ್ಲಿ ಸೋಂಕು ತ್ವರಿತವಾಗಿ ಹರಡುವುದು. ಅತಿ ಕಡಿಮೆ ಪ್ರಮಾಣದ ಬ್ಯಾಕ್ಟೀರಿಯಾಗಳಿಂದಲೂ ಸೋಂಕು ಉಂಟಾಗುವ ಕಾರಣ ಇದು ಅತ್ಯಂತ ಸಾಂಕ್ರಾಮಿಕ ರೋಗವಾಗಿದೆ.

ಶಿಗೆಲ್ಲಾ ಒಂದು ಬ್ಯಾಕ್ಟೀರಿಯಾ ಸೋಂಕಾಗಿದ್ದು ಇದರ ಪ್ರಮುಖ ಲಕ್ಷಣಗಳಲ್ಲಿ ಅತಿಸಾರ, ಜ್ವರ, ಹೊಟ್ಟೆನೋವು, ಹೊಟ್ಟೆ ಸೆಳೆತ, ವಾಂತಿ ಹಾಗೂ ಕೆಲವೊಮ್ಮೆ ರಕ್ತಮಿಶ್ರಿತ ಮಲವಿಸರ್ಜನೆ ಸೇರಿವೆ. ಮಕ್ಕಳಲ್ಲಿ ಮತ್ತು ವಯೋವೃದ್ಧರಲ್ಲಿ ತೀವ್ರ ನಿರ್ಜಲೀಕರಣ  ಉಂಟಾಗುವ ಅಪಾಯ ಹೆಚ್ಚಿರುವುದರಿಂದ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯವಾಗುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ವಯೋವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಸೋಂಕಿನ ಗಂಭೀರ ಪರಿಣಾಮಗಳಿಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಕೇರಳಂನಲ್ಲಿ ಶಿಗೆಲ್ಲಾ ಸೋಂಕಿನಿಂದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದೆ.

ಸೋಂಕು ತಡೆಗಟ್ಟಲು ಕುದಿಸಿದ ನೀರು ಸೇವಿಸುವುದು, ಕೈಗಳನ್ನು ಸಾಬೂನಿನಿಂದ ತೊಳೆಯುವುದು, ಸ್ವಚ್ಛ ಆಹಾರ ಸೇವಿಸುವುದು ಹಾಗೂ ಅತಿಸಾರದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

Shigella infection case has been confirmed in Wayanad, Kerala, increasing concern among health authorities. The bacterial disease, which spreads through contaminated food and water, has mainly affected children, prompting intensified surveillance and preventive measures across the district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror