ಶಿರಾಡಿ ಘಾಟ್‌ ಸುರಂಗ ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ | 10,146 ಕೋಟಿ ರೂಪಾಯಿಯ ಪ್ರಾಜೆಕ್ಟ್‌ ಇದು |

September 17, 2021
11:44 AM

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ರಸ್ತೆಯಲ್ಲಿ ಸುಲಲಿತ ವಾಹನ ಸಂಚಾರಕ್ಕಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಕೇಂದ್ರ ಸರಕಾರವನ್ನು ಮನವಿ ಮಾಡಿದ್ದಾರೆ. ಈಚೆಗೆ ಬೊಮ್ಮಾಯಿ ಅವರು ದೆಹಲಿ ಭೇಟಿಯ ವೇಳೆ  ಕೇಂದ್ರ ಸಚಿವರನ್ನು ಭೇಟಿಯಾದ ಸಂದರ್ಭ ಮನವಿ ಮಾಡಿದ್ದಾರೆ.

ಜಪಾನ್ ಸರ್ಕಾರದ ಸಹಯೋಗದೊಂದಿಗೆ ಬಂದರು ನಗರ ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾದ ಶಿರಾಡಿ ಘಾಟ್ ವಿಭಾಗದ ಸುರಂಗ ಬೈಪಾಸ್ ನಿರ್ಮಾಣಕ್ಕೆ ಸಿಎಂ ಅನುಮೋದನೆ ಕೋರಿದ್ದಾರೆ. ಈ ಯೋಜನೆಯ ಬಂಡವಾಳ ವೆಚ್ಚ ಸುಮಾರು 10,146 ಕೋಟಿ ರೂಪಾಯಿ ಆಗಿದೆ. ಹಲವು ವರ್ಷಗಳಿಂದ ಈ ಯೋಜನೆಯ ಪ್ರಸ್ತಾಪ ಇದೆ. ಪರಿಸರದ ಮೇಲೆ ಯಾವುದೇ ಹಾನಿಯಾಗದಂತೆ ಜಪಾನ್‌ ಮಾದರಿಯಲ್ಲಿ ಈ ಯೋಜನೆ ಅನುಷ್ಟಾನದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಸಿಎಂ, ಭೂಸ್ವಾಧೀನ ಮತ್ತು ಇತರ ಸಮಸ್ಯೆಗಳಿಂದಾಗಿ ಬಾಕಿಯಾದ ಯೋಜನೆಗಳ ಬಗ್ಗೆ ರಾಜ್ಯಕ್ಕೆ ಕಾಳಜಿ ಇದೆ,  ಈ ಯೋಜನೆಗಳ ಕಡೆಗೂ ಗಮನಹರಿಸಲಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಭೂಸ್ವಾಧೀನಕ್ಕೆ ಶೇಕಡಾ 30 ರಷ್ಟು ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಮತ್ತು ರಸ್ತೆ ನಿರ್ಮಾಣ ಸಾಮಗ್ರಿಗಳ ಮೇಲೆ ವಿಶೇಷವಾಗಿ ಸ್ಟೀಲ್, ಸಿಮೆಂಟ್, ಮರಳು ಮತ್ತು ಒಟ್ಟು ಮೊತ್ತದ ಮೇಲೆ ರಾಜ್ಯ ಜಿಎಸ್‌ಟಿ ವಿನಾಯಿತಿಗಾಗಿ ಸುಮಾರು 1,000 ಕೋಟಿ ರೂ ನಿಗದಿ ಪಡಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror