Advertisement
The Rural Mirror ವಾರದ ವಿಶೇಷ

ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

Share

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

1 hour ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

10 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

11 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

18 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

19 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

20 hours ago